Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:22 - ಕನ್ನಡ ಸತ್ಯವೇದವು C.L. Bible (BSI)

22 ಲೋಕದಲ್ಲಿ ಮಾನವನು ಹೃತ್ಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸೂರ್ಯನ ಕೆಳಗೆ ತಾನು ಪ್ರಯಾಸಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:22
21 ತಿಳಿವುಗಳ ಹೋಲಿಕೆ  

ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ದೊರಕುವ ಲಾಭವಾದರೂ ಏನು?


ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II


ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.


ನಮಗೆ ಊಟ, ಬಟ್ಟೆ ಇದ್ದರೆ ಅಷ್ಟೇ ಸಾಕು.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು.”


ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎರಡು ಕೈಹಿಡಿ ವ್ಯರ್ಥ ಪರಿಶ್ರಮಕ್ಕಿಂತ ಒಂದೇ ಕೈಹಿಡಿಯಷ್ಟು ಸಂಪಾದನೆ ಪಡೆದು ನೆಮ್ಮದಿಯಿಂದಿರುವುದು ಲೇಸು.


ಕಷ್ಟಪಟ್ಟು ಮಾಡುವ ದುಡಿಮೆಯಿಂದ ಒಬ್ಬನಿಗೆ ಸಿಗುವ ಲಾಭವಾದರೂ ಏನು?


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.


ಆದುದರಿಂದಲೇ ಸಂತೋಷವನ್ನು ಶ್ಲಾಘಿಸುತ್ತೇನೆ. ಮನುಷ್ಯನು ಅನ್ನಪಾನಗಳನ್ನು ಸೇವಿಸಿ ಸಂತೋಷಪಡುವುದಕ್ಕಿಂತ ಮೇಲಾದುದು ಅವನಿಗೆ ಈ ಲೋಕದಲ್ಲಿ ಇನ್ನಾವುದೂ ಇಲ್ಲ. ದೇವರು ಅವನಿಗೆ ಇಹದಲ್ಲಿ ಅನುಗ್ರಹಿಸುವ ಜೀವಾವಧಿಯಲ್ಲಿ ಅವನು ಪಡುವ ಪ್ರಯಾಸಕ್ಕೆ ಸುಖಾನುಭವ ಸೇರಿರುತ್ತದೆ.


ಅವನ ಜೀವಮಾನವೆಲ್ಲ ಅಂಧಕಾರಮಯ, ಅದರಲ್ಲಿ ದುಃಖದುಗುಡ, ರೋಗರುಜಿನ, ಕೋಪತಾಪ ಇದ್ದೇ ಇರುತ್ತವೆ.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?


ದುಡಿಯುವವನು ಹೊಟ್ಟೆಪಾಡಿಗಾಗಿ ದುಡಿಯುತ್ತಾನೆ; ಹೊಟ್ಟೆಕಾಟವೆ ಸಾಕು ಅವನನ್ನು ದುಡಿಸಲಿಕ್ಕೆ.


ಇಂಥವರನ್ನು ಮತ್ತು ಅವರೊಡನೆ ದುಡಿದು ಸೇವೆಮಾಡುವವರನ್ನು ಮುಂದಾಳುಗಳೆಂದು ಸನ್ಮಾನಿಸಿರಿ.


ಆಗ ನಾನೇ ಸ್ವತಃ ಮಾಡಿದ ಎಲ್ಲಾ ಕೆಲಸಕಾರ್ಯಗಳನ್ನೂ ಪಟ್ಟ ಎಲ್ಲ ಪ್ರಯಾಸವನ್ನೂ ಗಮನವಿಟ್ಟು ಪರಿಶೀಲಿಸಿದೆ. ಆದರೆ ಇಗೋ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಎಲ್ಲವೂ ವ್ಯರ್ಥ; ಲೋಕದಲ್ಲಿ ಲಾಭಕರವಾದುದು ಏನೂ ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು