Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರತಿಯೊಂದು ಕಾರ್ಯಕ್ಕೂ ಕಾಲವು ಕ್ಲುಪ್ತವಾಗಿದೆ; ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರತಿಯೊಂದಕ್ಕೂ ಸೂಕ್ತವಾದ ಸಮಯವಿದೆ. ಭೂಮಿಯ ಮೇಲೆ ನಡೆಯುವ ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ. ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:1
12 ತಿಳಿವುಗಳ ಹೋಲಿಕೆ  

ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.


ಆಕಾಶದಲ್ಲಿ ಕಾಣುವ ಲಕ್ಷಣಗಳನ್ನು ನೀವು ಅರ್ಥಮಾಡಿಕೊಳ್ಳಬಲ್ಲಿರಿ; ಆದರೆ ಈಗಿನ ಕಾಲದ ಲಕ್ಷಣಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮಿಂದಾಗದು.


ಸುಖದಿನದಲ್ಲಿ ಸಂತೋಷದಿಂದಿರು, ದುಃಖದಿನದಲ್ಲಿ ಆಲೋಚಿಸಿನೋಡು; ಮನುಷ್ಯನು ತನ್ನ ಆಯುಸ್ಸು ಕಳೆದ ಮೇಲೆ ಸಂಭವಿಸುವುದೇನೆಂದು ಗ್ರಹಿಸಲಾಗದಂತೆ ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ.


ಆಗ ಎಲೀಷನು, “ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇಮರದ ತೋಪುಗಳು, ದ್ರಾಕ್ಷೀತೋಟಗಳು, ಕುರಿದನಗಳು, ಗಂಡಾಳು, ಹೆಣ್ಣಾಳುಗಳು, ಇವನ್ನು ಸಂಪಾದಿಸುವುದಕ್ಕೆ ಇದು ಸಮಯವೇ?


ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.


ಲೋಕದ ಆಗುಹೋಗುಗಳು ಕೇಡಿಗೆ ಈಡಾಗುವುವೆಂದು ನನಗೆ ಕಂಡುಬಂದಿತು. ಜೀವನವೇ ನೀರಸವೆಂದು ನನಗೆ ತೋಚಿತು; ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಸಮಸ್ತವೂ ವ್ಯರ್ಥವೇ ಸರಿ!


ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು.


ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.


ಕೆಲಸದ ಸಾಮಾನುಗಳನ್ನು ಆಣೆಮಾಡು, ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆ ಬಳಿಕ ಮನೆ ಕಟ್ಟಲು ತೊಡಗು.


ಈಜಿಪ್ಟಿನ ಅರಸನು ಗಡಿಬಿಡಿಯ ಮಾತಾಡಿ ಸದಾವಕಾಶವನ್ನು ಕಳೆದುಕೊಂಡವನೆಂದು ಕರೆಸಿಕೊಂಡ ವ್ಯಕ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು