Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:11 - ಕನ್ನಡ ಸತ್ಯವೇದವು C.L. Bible (BSI)

11 ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ; ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ; ಆದರೂ ದೇವರು ಆದ್ಯಂತವಾಗಿ ನಡಿಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಲೋಕವನ್ನು ಕುರಿತು ಆಲೋಚಿಸುವುದಕ್ಕೆ ದೇವರು ನನಗೆ ಜ್ಞಾನವನ್ನು ಕೊಟ್ಟಿದ್ದರೂ ದೇವರ ಕಾರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವೇ ಇಲ್ಲ. ದೇವರು ಪ್ರತಿಯೊಂದನ್ನೂ ತಕ್ಕ ಸಮಯದಲ್ಲಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:11
19 ತಿಳಿವುಗಳ ಹೋಲಿಕೆ  

ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?


ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಅವನಿಂದ ಸಾಧ್ಯವಾಗದು. ಹೌದು, ಜ್ಞಾನಿ ತನ್ನಿಂದಾಗುತ್ತದೆ ಎಂದು ಹೇಳಿಕೊಳ್ಳಬಹುದು; ಆದರೆ ಅವನಿಂದಲೂ ಅದು ಸಾಧ್ಯವಾಗದು.


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ಇದೊಂದು ನಿನಗೆ ತಿಳಿದಿರಲಿ: ದೇವರು ಮನುಷ್ಯರನ್ನು ಸಜ್ಜನರನ್ನಾಗಿ ಸೃಷ್ಟಿಸಿದರು; ಮನುಷ್ಯರಾದರೂ ಅನೇಕ ಸಮಸ್ಯೆಗಳನ್ನು ಕಲ್ಪಿಸಿಕೊಂಡಿದ್ದಾರೆ. ನನಗೆ ಕಂಡುಬಂದುದು ಇದುವೇ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.


ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.


ದೇವರ ಸೃಷ್ಟಿಕಾರ್ಯವನ್ನು ಗಮನಿಸು; ಅವರು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವವರು ಯಾರು?


ಇದನ್ನೆಲ್ಲ ಜ್ಞಾನದಿಂದ ಪರೀಕ್ಷಿಸಿದೆ, ಜ್ಞಾನಿಯಾಗುತ್ತೇನೆಂದು ನಿರ್ಧರಿಸಿಕೊಂಡೆ. ಆದರೆ ಅದು ನನಗೆ ದೂರವಾಯಿತು.


ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನಿನ್ನಿಂದ ತಿಳಿಯಲಾಗದು. ಅಂತೆಯೇ ಸರ್ವೇಶ್ವರನಾದ ದೇವರ ಕಾರ್ಯವನ್ನು ನಿನ್ನಿಂದ ಗ್ರಹಿಸಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು