Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:12 - ಕನ್ನಡ ಸತ್ಯವೇದವು C.L. Bible (BSI)

12 ಮನುಷ್ಯರು ತಮ್ಮ ಇಡೀ ಜೀವಮಾನದಲ್ಲಿ ಸುಖಸಂತೋಷವನ್ನು ಅನುಭವಿಸುವುದಕ್ಕಿಂತ ಮೇಲಾದುದು ಅವರಿಗೆ ಯಾವುದೂ ಇಲ್ಲ ಎಂಬುದನ್ನು ನಾನು ಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬದುಕಿರುವಷ್ಟು ಕಾಲ ಸಂತೋಷವಾಗಿದ್ದು ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯರಿಗೆ ಇಲ್ಲವೆಂದು ಕಲಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:12
17 ತಿಳಿವುಗಳ ಹೋಲಿಕೆ  

ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?


ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ, ಅವರ ಸನ್ನಿಧಿಯಲ್ಲೇ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷದಿಂದಿರಬೇಕು; ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಆಳುಗಳು ಹಾಗು ನಿಮ್ಮ ಊರಲ್ಲಿರುವ ಲೇವಿಯರು ಇಂಥವುಗಳನ್ನು ಊಟಮಾಡಬೇಕು.


ಸರ್ವೇಶ್ವರ ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲ ಸುಖ ಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯೆಯಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.


ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.


ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.


ಆದುದರಿಂದಲೇ ಸಂತೋಷವನ್ನು ಶ್ಲಾಘಿಸುತ್ತೇನೆ. ಮನುಷ್ಯನು ಅನ್ನಪಾನಗಳನ್ನು ಸೇವಿಸಿ ಸಂತೋಷಪಡುವುದಕ್ಕಿಂತ ಮೇಲಾದುದು ಅವನಿಗೆ ಈ ಲೋಕದಲ್ಲಿ ಇನ್ನಾವುದೂ ಇಲ್ಲ. ದೇವರು ಅವನಿಗೆ ಇಹದಲ್ಲಿ ಅನುಗ್ರಹಿಸುವ ಜೀವಾವಧಿಯಲ್ಲಿ ಅವನು ಪಡುವ ಪ್ರಯಾಸಕ್ಕೆ ಸುಖಾನುಭವ ಸೇರಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು