ಪ್ರಸಂಗಿ 3:14 - ಕನ್ನಡ ಸತ್ಯವೇದವು C.L. Bible (BSI)14 ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೇವರ ಕಾರ್ಯವೆಲ್ಲವೂ ನಿತ್ಯವೆಂದು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಲಾರೆವು, ಅದರಿಂದ ಯಾವದನ್ನೂ ತೆಗೆಯಲಾರೆವು; ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬದೇ ಕಾರಣವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |