Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:17 - ಕನ್ನಡ ಸತ್ಯವೇದವು C.L. Bible (BSI)

17 ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ನಾನು ಮನಸ್ಸಿನಲ್ಲಿ - ದೇವರು ಧರ್ಮಿಗಳಿಗೂ ಅಧರ್ಮಿಗಳಿಗೂ ನ್ಯಾಯತೀರಿಸುವನು.; ಆತನ ನ್ಯಾಯಕ್ರಮದಲ್ಲಿ ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯವುಂಟಲ್ಲವೆ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ನಾನು ಮನಸ್ಸಿನಲ್ಲಿ, “ದೇವರು ಪ್ರತಿಯೊಂದಕ್ಕೂ ಸಮಯವನ್ನು ಗೊತ್ತುಪಡಿಸಿದ್ದಾನೆ. ಜನರು ಮಾಡುವ ಪ್ರತಿಯೊಂದಕ್ಕೂ ನ್ಯಾಯತೀರಿಸಲು ಆತನು ಸಮಯವನ್ನು ಗೊತ್ತುಪಡಿಸಿದ್ದಾನೆ. ದೇವರು ನೀತಿವಂತರಿಗೂ ದುಷ್ಟರಿಗೂ ನ್ಯಾಯತೀರಿಸುವನು” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು, “ನೀತಿವಂತರನ್ನೂ ದುಷ್ಟರನ್ನೂ ದೇವರು ನ್ಯಾಯತೀರಿಸುವನು. ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ, ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:17
32 ತಿಳಿವುಗಳ ಹೋಲಿಕೆ  

ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ:


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು", ಎಂದು ಹಾಡಿದರು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.


ಅಲ್ಲದೆ, ಪಿತನು ಯಾರನ್ನೂ ತೀರ್ಪಿಗೆ ಗುರಿಮಾಡುವುದಿಲ್ಲ. ತೀರ್ಪುಕೊಡುವ ಅಧಿಕಾರವನ್ನೆಲ್ಲಾ ಅವರು ಪುತ್ರನಿಗೆ ಕೊಟ್ಟಿದ್ದಾರೆ.


ಅವನು, “ದಾನಿಯೇಲನೇ ಹೋಗು; ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಲ್ಪಟ್ಟು ಮುದ್ರಿತವಾಗಿವೆ.


“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ಪ್ರತಿಯೊಂದು ಕಾರ್ಯಕ್ಕೆ ಒಂದು ಕಾಲ, ಒಂದು ಕ್ರಮ ಇರುತ್ತದೆಯಲ್ಲವೆ? ಮನುಷ್ಯನು ಎದುರಿಸಬೇಕಾದ ಕಷ್ಟಕಾರ್ಪಣ್ಯಗಳು ಘನತರವಾದುವು.


“ಬಾ ಮನವೇ, ಸಂತೋಷದ ಮೂಲಕ ನಿನ್ನನ್ನು ಪರೀಕ್ಷಿಸುವೆ; ಸುಖಭೋಗವನ್ನು ಅನುಭವಿಸು” ಎಂದು ಮನಸ್ಸಿನಲ್ಲೇ ಹೇಳಿಕೊಂಡೆ. ಆದರೆ ಇದೂ ವ್ಯರ್ಥವೇ ಸರಿ.


ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆ: “ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ಅರಸರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ಜ್ಞಾನ ಹಾಗೂ ತಿಳುವಳಿಕೆಯ ವಿಶೇಷ ಅನುಭವ ನನಗಿದೆ".


ಸಹೋದರರೇ, ಇದೆಲ್ಲ ನಡೆಯಲಿರುವ ಸಮಯ ಸಂದರ್ಭಗಳನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು