ಪ್ರಸಂಗಿ 3:18 - ಕನ್ನಡ ಸತ್ಯವೇದವು C.L. Bible (BSI)18 ಮತ್ತೆ ಮನಸ್ಸಿನಲ್ಲೇ ಮಾನವರ ಪರಿಸ್ಥಿತಿಯ ಬಗ್ಗೆ ಆಲೋಚನೆ ಮಾಡಿದೆ; ಮನುಷ್ಯರು ಪಶುಗಳಿಗೆ ಸಮಾನರೆಂದು ತಾವೇ ಗ್ರಹಿಸಿಕೊಳ್ಳುವುದಕ್ಕೆ ಆಸ್ಪದವಾಗುವಂತೆ ದೇವರು ಮನುಷ್ಯರನ್ನು ಪರೀಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ನನ್ನ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು, “ದೇವರು ಮನುಷ್ಯರನ್ನು ಪರೀಕ್ಷಿಸಿ, ಅವರು ಪಶುಗಳಿಗೆ ಸಮಾನರು ಎಂಬುದನ್ನು ತೋರಿಸುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮತ್ತೆ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು - ದೇವರು ಮನುಷ್ಯರನ್ನು ಪರೀಕ್ಷಿಸುವದಕ್ಕೂ ಮನುಷ್ಯರು ಪಶುಪ್ರಾಯರಾಗಿದ್ದೇವೆಂದು ತಾವೇ ಗ್ರಹಿಸಿಕೊಳ್ಳುವದಕ್ಕೂ ಆಸ್ಪದವಾಗುವಂತೆ ಇದು ನರಜನ್ಮದವರ ನಿವಿುತ್ತವಾಗಿ ಆಯಿತಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅಲ್ಲದೆ ಮನಸ್ಸಿನಲ್ಲಿ ಹೀಗೆಂದುಕೊಂಡೆನು: “ಮನುಷ್ಯರು ಪ್ರಾಣಿಗಳಿಗಿಂತ ಮೇಲಾದವರಲ್ಲ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂಬುದು ದೇವರ ಇಷ್ಟವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿ |