Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:19 - ಕನ್ನಡ ಸತ್ಯವೇದವು C.L. Bible (BSI)

19 ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುತ್ತದೆ. ಎಲ್ಲಕ್ಕೂ ಇರುವ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವೂ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವದು; ಎಲ್ಲಕ್ಕೂ ಪ್ರಾಣ ಒಂದೇ; ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ; ಎಲ್ಲಾ ಬರೀ ಗಾಳಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮನುಷ್ಯನು ಪ್ರಾಣಿಗಿಂತಲೂ ಉತ್ತಮನಾಗಿರುವನೇ? ಇಲ್ಲ! ಏಕೆಂದರೆ ಪ್ರತಿಯೊಂದು ಉಪಯೋಗವಿಲ್ಲದ್ದು. ಪ್ರಾಣಿಗಳಿಗೂ ಮನುಷ್ಯರಿಗೂ ಒಂದೇ ಗತಿಯಾಗುವುದು; ಪ್ರಾಣಿಗಳೂ ಸಾಯುವವು, ಮನುಷ್ಯರೂ ಸಾಯುವರು. ಮನುಷ್ಯರಿಗೂ ಪ್ರಾಣಿಗಳಿಗೂ ಇರುವುದು ಒಂದೇ ‘ಉಸಿರು.’ ಸತ್ತ ಪ್ರಾಣಿಗೂ ಸತ್ತ ಮನುಷ್ಯನಿಗೂ ವ್ಯತ್ಯಾಸವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ಮೃಗಗಳಿಗೆ ಸಂಭವಿಸುವುದು ಮನುಷ್ಯರಿಗೂ ಸಂಭವಿಸುತ್ತದೆ. ಇಬ್ಬರಿಗೂ ಒಂದೇ ಸಂಗತಿ ಸಂಭವಿಸುತ್ತದೆ. ಒಂದು ಹೇಗೆ ಸಾಯುತ್ತದೋ ಹಾಗೆ ಇನ್ನೊಂದೂ ಸಾಯುತ್ತದೆ. ಎಲ್ಲಕ್ಕೂ ಒಂದೇ ಪ್ರಾಣ ಇದೆ. ಆ ರೀತಿಯಲ್ಲಿ ಮೃಗಕ್ಕಿಂತ ಮನುಷ್ಯನಿಗೆ ಹೆಚ್ಚು ಶ್ರೇಷ್ಠತೆ ಇಲ್ಲ. ಎಲ್ಲವೂ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:19
18 ತಿಳಿವುಗಳ ಹೋಲಿಕೆ  

ನೆಲೆಯಾಗಿರನು ನರನು ಪಟ್ಟಪದವಿಯಲಿ I ನಾಶವಾಗುವನು ಪಶುಪ್ರಾಣಿಗಳ ಪರಿ II


ನೆಲೆಯಾಗಿರನು ಪಟ್ಟಪದವಿಯಲಿ I ನಾಶವಾಗುವನು ಪಶುಪ್ರಾಣಿಗಳ ಪರಿ II


ಏಕೆಂದರೆ ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ನಿರಂತರವಾಗಿ ಮರೆತುಹೋಗುವರು. ಮುಂದಿನ ಕಾಲದವರು ಈಗಿನವರನ್ನೆಲ್ಲ ಮರೆತುಬಿಡುವರು ಎಂಬುದು ನಿಶ್ಚಯ. ನಿಸ್ಸಂದೇಹವಾಗಿ ಮೂಢನಂತೆ ಜ್ಞಾನಿಯು ಮೃತನಾಗುವನು.


“ಜ್ಞಾನಿಗೆ ಹಣೆಯಲ್ಲಿ ಕಣ್ಣು, ಮೂಢನೋ ಕತ್ತಲೆಯಲ್ಲಿ ನಡೆಯುತ್ತಾನೆ". ಆದರೆ ಇವರಿಬ್ಬರ ಗತಿ ಒಂದೇ ಎಂದು ಕಂಡುಬಂದಿತು.


ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II


ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ಅದು ಹೇಗೆಂದರೆ - ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಅಥವಾ ಎಲ್ಲರಿಗೂ ಸಂಭವಿಸುವ ಗತಿ ಇವರಿಗೆ ಒದಗಿದರೆ ಸರ್ವೇಶ್ವರ ನನ್ನನ್ನು ಕಳಿಸಲಿಲ್ಲವೆಂದು ತಿಳಿದುಕೊಳ್ಳಬೇಕು.


ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.


ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು; ಸಜ್ಜನನಿಗೂ ದುರ್ಜನನಿಗೂ, ಒಳ್ಳೆಯವನಿಗೂ (ಕೆಟ್ಟವನಿಗೂ), ಶುದ್ಧನಿಗೂ, ಅಶುದ್ಧನಿಗೂ ಬಲಿಯನ್ನರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿ ಕಾದಿದೆ; ನಿರ್ದೋಷಿಯಂತೆ ದೋಷಿಯೂ ಇರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನೂ ಇರುವನು.


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ಮೂಢನಂಬಿಕೆಯುಳ್ಳವರ ಗತಿ ಇದುವೇ I ಆ ಮೂಢರ ನಂಬಿ ನಡೆದವರಿಗು ಹಾಗೆಯೇ II


ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ.


ಜ್ಞಾನ ಎಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳನ್ನು ಅರಿತುಕೊಳ್ಳಲು ಮನಸ್ಸು ಮಾಡಿದೆ. ಆದರೆ ಇದೂ ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ವ್ಯರ್ಥ ಎಂದು ಅರಿತುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು