Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:20 - ಕನ್ನಡ ಸತ್ಯವೇದವು C.L. Bible (BSI)

20 ಎಲ್ಲ ಪ್ರಾಣಿಗಳೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು, ಎಲ್ಲವೂ ಮರಳಿ ಮಣ್ಣಿಗೆ ಸೇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು; ಎಲ್ಲಾ ಮಣ್ಣಿನಿಂದಾದವು, ಎಲ್ಲಾ ಮಣ್ಣಿಗೆ ಪುನಃ ಸೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ ಬಂದವು; ಕೊನೆಗೆ ಅವು ಮಣ್ಣಿಗೆ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು. ಎಲ್ಲವೂ ಮಣ್ಣಿಗೆ ಸೇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:20
20 ತಿಳಿವುಗಳ ಹೋಲಿಕೆ  

ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಸಮಸ್ತಜನರು ಒಟ್ಟಾಗಿ ಅಳಿದುಹೋಗುವರು ಮರಳಿ ಮನುಷ್ಯರೆಲ್ಲರೂ ಮಣ್ಣಾಗಿ ಮಾರ್ಪಡುವರು.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಸಾವಿರ ವರ್ಷದ ಮೇಲೆ ಸಾವಿರ ವರ್ಷ ಬದುಕಿಯೂ ಸುಖವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಇವೆರಡೂ ಒಂದೇ ಸ್ಥಳಕ್ಕೆ ಹೋಗುತ್ತವೆ, ಅಲ್ಲವೇ?


ಮನುಷ್ಯನ ಆತ್ಮ ಮೇಲಕ್ಕೆ ಏರುತ್ತದೋ? ಪಶುವಿನ ಆತ್ಮ ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ? ಯಾರಿಗೆ ಗೊತ್ತು?”


ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II


ಮೋಡ ಕರಗಿ ಮಾಯವಾಗುವಂತೆ ಪಾತಾಳಕ್ಕಿಳಿದವನು ಬಾರನು ಮತ್ತೆ.


ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


ಪಾತಾಳವನ್ನೇ ನನ್ನ ಮನೆಯೆಂದು ನಾನು ಭಾವಿಸಿದೆನಾದರೆ ಕತ್ತಲಲ್ಲೇ ನನ್ನ ಹಾಸಿಗೆಯನ್ನು ಹಾಕಿಕೊಂಡೆನಾದರೆ,


ನೋಡಿದ ಮೇಲೆ ನಿನ್ನ ಅಣ್ಣ ಆರೋನನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದಂತೆ ನೀನು ಕೂಡ ಸೇರಬೇಕು.


ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದ್ದನು. ಅನಂತರ ಸತ್ತು ತನ್ನ ಪಿತೃಗಳ ಬಳಿಗೆ ಸೇರಿದನು.


ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ಆದರೂ ಕೇಡಿಗೆ ಈಡಾದವನು ಕೈಚಾಚುವುದಿಲ್ಲವೆ ಸಹಾಯಕ್ಕಾಗಿ? ಆಪತ್ತಿಗೆ ಗುರಿಯಾದವನು ಕೂಗಿಕೊಳ್ಳುವುದಿಲ್ಲವೆ ನೆರವಿಗಾಗಿ?


ಏಕೆನೆ, ನಮ್ಮ ಸ್ವಭಾವವನು ಆತನು ಬಲ್ಲ I ನಾವು ಹುಡಿಮಣ್ಣೆಂದವನಿಗೆ ತಿಳಿದಿದೆಯಲ್ಲಾ II


ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.


ಮನುಜನೋ ಬಿದ್ದಿರುತ್ತಾನೆ ಸತ್ತು ಕೊನೆಯುಸಿರೆಳೆದಾಗ ಎಲ್ಲವು ಮುಗಿಯಿತು.


ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು