Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:6 - ಕನ್ನಡ ಸತ್ಯವೇದವು C.L. Bible (BSI)

6 ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗಳಿಸುವ ಸಮಯ, ಕಳೆಯುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ, ಹರಿಯುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹುಡುಕುವ ಸಮಯ, ಹುಡುಕದಿರುವ ಸಮಯ. ವಸ್ತುಗಳನ್ನು ಇಟ್ಟುಕೊಳ್ಳುವ ಸಮಯ, ವಸ್ತುಗಳನ್ನು ಬಿಸಾಡುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:6
22 ತಿಳಿವುಗಳ ಹೋಲಿಕೆ  

ಮೂರನೆಯ ದಿನ ಅವರು ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.


ಪ್ರತಿಯೊಬ್ಬನೂ ಸಾಕಷ್ಟು ತಿಂದ ಮೇಲೆ ಗೋದಿಯನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದರು.


ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.


ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಹಾಕು. ಬಹುದಿನದ ಮೇಲೆ ಅದು ಬಡ್ಡಿ ಸಮೇತ ನಿನಗೆ ಸಿಕ್ಕುವುದು.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ಆಗ ಎಲೀಷನು, “ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇಮರದ ತೋಪುಗಳು, ದ್ರಾಕ್ಷೀತೋಟಗಳು, ಕುರಿದನಗಳು, ಗಂಡಾಳು, ಹೆಣ್ಣಾಳುಗಳು, ಇವನ್ನು ಸಂಪಾದಿಸುವುದಕ್ಕೆ ಇದು ಸಮಯವೇ?


ಇಷ್ಟರೊಳಗೆ ಯೋನನು ಹಡಗಿನ ತಳಭಾಗಕ್ಕೆ ಇಳಿದುಹೋಗಿ ಹಾಯಾಗಿ ಮಲಗಿದ್ದನು. ಅವನಿಗೆ ಗಾಢನಿದ್ರೆ ಹತ್ತಿತ್ತು.


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ, ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು, ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿಮ್ಮ ಕುಮಾರ, ಸಿರಿಯಾದವರ ಅರಸನಾದ ಬೆನ್ಹದದರು, ತಮಗೆ ಗುಣವಾಗುವುದೋ ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದು ಹೇಳಿದನು.


ಅವರು ಜೋರ್ಡನ್ ನದಿಯವರೆಗೂ ಹೋಗಿ, ದಾರಿಯಲ್ಲೆಲ್ಲಾ ತಮ್ಮ ಬಟ್ಟೆಬರೆಗಳನ್ನೂ ಸಾಮಾನು ಸರಂಜಾಮುಗಳನ್ನೂ ಬಿಸಾಡಿರುವುದನ್ನು ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.


ಮೆಸಪೊಟೇಮಿಯಾದಲ್ಲಿ ತಾನು ಗಳಿಸಿಕೊಂಡಿದ್ದ ಆಸ್ತಿಯನ್ನೆಲ್ಲ ತೆಗೆದುಕೊಂಡು, ಜಾನುವಾರುಗಳನ್ನೆಲ್ಲ ಅಟ್ಟಿಕೊಂಡು ಕಾನಾನ್ ನಾಡಿಗೆ, ತನ್ನ ತಂದೆ ಇಸಾಕನ ಬಳಿಗೆ ಹೊರಟನು.


ಕಲ್ಲುಗಳನ್ನು ಬಿಸಾಡುವ ಸಮಯ, ಕಲ್ಲುಗಳನ್ನು ಕೂಡಿಸಿಡುವ ಸಮಯ ಆಲಿಂಗನ ಮಾಡುವ ಸಮಯ, ಆಲಿಂಗನ ಮಾಡದ ಸಮಯ.


ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು