Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:12 - ಕನ್ನಡ ಸತ್ಯವೇದವು C.L. Bible (BSI)

12 ಒಬ್ಬಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಕೂಡ ಎದುರಾಗಿ ನಿಲ್ಲಬಹುದು. ಮೂರು ಹುರಿಗಳಿಂದ ಹೆಣೆದ ಹಗ್ಗ ಸುಲಭವಾಗಿ ಕಿತ್ತುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಬ್ಬೊಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಎದುರಾಗಿ ನಿಲ್ಲಬಹುದು; ಮೂರು ಹುರಿಯ ಹಗ್ಗ ಬೇಗ ಕಿತ್ತು ಹೋಗುವದಿಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದುವೇಳೆ ಮೂವರಿದ್ದರೆ ಅವರು ಮೂರೆಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಒಬ್ಬಂಟಿಗನ ಮೇಲೆ ಜಯ ಸಾಧಿಸಲು, ಇಬ್ಬರು ಎದುರಾಗಿ ನಿಲ್ಲಬಹುದು. ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:12
8 ತಿಳಿವುಗಳ ಹೋಲಿಕೆ  

ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು.


ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ಪ್ರತಿಭಟಿಸಲು ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.


ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ನೇಮಿಸಿದ್ದನು.


ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿಹೋಗಿ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲು ಒಪ್ಪಲಿಲ್ಲ.


ಇದಲ್ಲದೆ, ಒಬ್ಬನ ಮಗ್ಗುಲಲ್ಲಿ ಇನ್ನೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾದೀತು!


ಬುದ್ಧಿಮಾತಿಗೆ ಕಿವಿಗೊಡದ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು