Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:13 - ಕನ್ನಡ ಸತ್ಯವೇದವು C.L. Bible (BSI)

13 ಬುದ್ಧಿಮಾತಿಗೆ ಕಿವಿಗೊಡದ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಎಚ್ಚರದ ಮಾತಿಗೆ ಕಿವಿಗೊಡುವದನ್ನು ಬಿಟ್ಟ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯೌವನಸ್ಥನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜ್ಞಾನಿಯಾದ ಬಡಯುವಕನು ಎಚ್ಚರದ ಮಾತಿಗೆ ಕಿವಿಗೊಡದ ಮೂಢ ವೃದ್ಧರಾಜನಿಗಿಂತ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:13
11 ತಿಳಿವುಗಳ ಹೋಲಿಕೆ  

ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.


ದುರ್ಮಾರ್ಗಿಯಾದ ಧನವಂತನಿಗಿಂತ ನಿರ್ದೋಷಿಯಾಗಿ ನಡೆವ ದರಿದ್ರನೇ ಲೇಸು.


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಆಗ ಜೋಸೆಫನಿಗೆ ಹದಿನೇಳು ವರ್ಷ, ಇನ್ನೂ ಯುವಕ, ತನ್ನ ಅಣ್ಣಂದಿರ ಜೊತೆಯಲ್ಲಿ, ಅಂದರೆ ತನ್ನ ಮಲತಾಯಿಯರಾದ ಬಿಲ್ಹಾ, ಜಿಲ್ಪಾ ಎಂಬುವರ ಮಕ್ಕಳ ಜೊತೆಯಲ್ಲಿ, ಆಡುಕುರಿಗಳನ್ನು ಮೇಯಿಸುತ್ತಿದ್ದ, ಅಣ್ಣಂದಿರು ಏನಾದರೂ ತಪ್ಪಿ ನಡೆದರೆ ತಂದೆಗೆ ವರದಿ ಮಾಡುತ್ತಿದ್ದ.


ಒಬ್ಬಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಕೂಡ ಎದುರಾಗಿ ನಿಲ್ಲಬಹುದು. ಮೂರು ಹುರಿಗಳಿಂದ ಹೆಣೆದ ಹಗ್ಗ ಸುಲಭವಾಗಿ ಕಿತ್ತುಹೋಗುವುದಿಲ್ಲ.


ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು