Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:8 - ಕನ್ನಡ ಸತ್ಯವೇದವು C.L. Bible (BSI)

8 “ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎರಡನೆಯವನಿಲ್ಲದೆ ಒಬ್ಬೊಂಟಿಗನೊಬ್ಬನಿದ್ದಾನೆ; ಅವನಿಗೆ ಅಣ್ಣತಮ್ಮಂದಿರೂ ಇಲ್ಲ, ಮಕ್ಕಳೂ ಇಲ್ಲ; ಆದರೂ ಅವನ ಶ್ರಮೆಗೆ ಪಾರವಿಲ್ಲ, ಧನದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಲೇ ಇದ್ದೇನೆ ಅಂದುಕೊಳ್ಳುವನು. ಇದೂ ವ್ಯರ್ಥ, ಕೇವಲ ಪ್ರಯಾಸವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:8
21 ತಿಳಿವುಗಳ ಹೋಲಿಕೆ  

ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.


ನರಕ ಪಾತಾಳಗಳಿಗೆ ತೃಪ್ತಿಯೇ ಇಲ್ಲ; ಮನುಷ್ಯನ ಕಣ್ಣುಗಳಿಗೂ ತೃಪ್ತಿಯಿಲ್ಲ.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ.


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.


ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !


ಹಣದಾಸೆಯುಳ್ಳವನಿಗೆ ಎಷ್ಟು ಹಣ ಇದ್ದರೂ ತೃಪ್ತಿಯಿಲ್ಲ. ಆಸ್ತಿ ಬಯಸುವವನಿಗೆ ಎಷ್ಟು ಆದಾಯವಿದ್ದರೂ ನೆಮ್ಮದಿಯಿಲ್ಲ. ಇದೂ ಸಹ ವ್ಯರ್ಥವೇ.


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ಅವನ ಮನಸ್ಸಿಗೆ ನೆಮ್ಮದಿ ಇಲ್ಲ, ಇದು ಸಹ ವ್ಯರ್ಥವೇ ಸರಿ.


ಒಬ್ಬನು ಜ್ಞಾನದಿಂದಲೂ ತಿಳುವಳಿಕೆ ಇಂದಲೂ ಕೆಲಸಮಾಡಿ ಕಾರ್ಯವನ್ನು ಸಿದ್ಧಿಗೆ ತಂದಮೇಲೆ, ಅದಕ್ಕಾಗಿ ಪ್ರಯಾಸಪಡದವನಿಗೆ ಅದನ್ನು ವಾರಸುದಾರನಾಗಿ ಬಿಡಬೇಕಾಗುತ್ತದೆ. ಇದು ಸಹ ವ್ಯರ್ಥವಲ್ಲವೆ? ಇದು ಅನ್ಯಾಯವಲ್ಲವೇ?


ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆ. ಒಬ್ಬಂಟಿಗನಾದ ಮನುಷ್ಯನೊಬ್ಬ ಇದ್ದ. ಅವನಿಗೆ ಅಣ್ಣತಮ್ಮಂದಿರು ಇರಲಿಲ್ಲ. ಮಕ್ಕಳುಮರಿ ಇರಲಿಲ್ಲ. ಆದರೂ ಅವನ ದುಡಿಮೆಗೆ ಎಲ್ಲೆ ಇರಲಿಲ್ಲ. ಆಸ್ತಿಪಾಸ್ತಿಯಿಂದ ಅವನ ಕಣ್ಣಿಗೆ ತೃಪ್ತಿ ಇರಲಿಲ್ಲ.


ಇಂತಿರಲು ಪ್ರಭು, ನಾನೇತಕೆ ಕಾದಿರಬೇಕು? I ನೀನೆ ಅಲ್ಲವೆ ನನಗೆ ನಂಬಿಕೆ, ಇದು ಸಾಕು II


:ಸಾರ್ವಜನಿಕ ಒಳಿತು,” “ಅಧಿಪತಿಗಳ ಸೇವೆ” ಎಂದೆಲ್ಲ ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು