Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:9 - ಕನ್ನಡ ಸತ್ಯವೇದವು C.L. Bible (BSI)

9 ಒಬ್ಬನಿಗಿಂತ ಇಬ್ಬರು ಲೇಸು; ಅವರ ಪ್ರಯಾಸಕ್ಕೆ ಹೆಚ್ಚಿನ ಲಾಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಒಬ್ಬನಿಗಿಂತ ಇಬ್ಬರು ಲೇಸು; ಅವರ ಪ್ರಯಾಸಕ್ಕೆ ಒಳ್ಳೆಯ ಲಾಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಬ್ಬರು ಒಬ್ಬನಿಗಿಂತಲೂ ಉತ್ತಮ. ಇಬ್ಬರು ಒಟ್ಟಾಗಿ ದುಡಿದರೆ ಹೆಚ್ಚು ಗಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಬ್ಬನಿಗಿಂತ ಇಬ್ಬರು ಲೇಸು, ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:9
15 ತಿಳಿವುಗಳ ಹೋಲಿಕೆ  

ಕಬ್ಬಿಣ ಕಬ್ಬಿಣವನ್ನು ಹರಿತ ಮಾಡುವಂತೆ ಮಿತ್ರನು ಮಿತ್ರನ ಬುದ್ಧಿಯನ್ನು ಹರಿತಮಾಡಬಲ್ಲ.


ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.


ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.


ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ.


ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.


ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುತ್ತಾನೆ; ಬಿದ್ದಾಗ ಎತ್ತುವವನು ಇಲ್ಲದಿದ್ದರೆ ಅವನ ಗತಿ ದುರ್ಗತಿಯೇ ಸರಿ.


“ಸಿರಿಯಾದವರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು