Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:11 - ಕನ್ನಡ ಸತ್ಯವೇದವು C.L. Bible (BSI)

11 ಸಿರಿಸಂಪತ್ತು ಹೆಚ್ಚಿದಂತೆ ಅನುಭವಿಸುವವರ ಸಂಖ್ಯೆಯೂ ಹೆಚ್ಚುತ್ತದೆ. ಯಜಮಾನನಿಗೆ ತಾನು ಐಶ್ವರ್ಯವಂತನೆಂಬ ಭಾವನೆಯ ಹೊರತು ಮತ್ತಾವ ಲಾಭವು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಸ್ತಿ ಹೆಚ್ಚಾದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚಾಗುವುದು. ಅದನ್ನು ಕಣ್ಣಿನಿಂದ ನೋಡುವುದೇ ಹೊರತು ಯಜಮಾನನಿಗೆ ಇನ್ಯಾವ ಲಾಭವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೊತ್ತು ಹೆಚ್ಚಿದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚುವದು; ಅದನ್ನು ಕಣ್ಣಿಂದ ನೋಡುವದೇ ಹೊರತು ಯಜಮಾನನಿಗೆ ಇನ್ನಾವ ಲಾಭವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಐಶ್ವರ್ಯ ಹೆಚ್ಚಿದಂತೆಲ್ಲಾ “ಅನುಭವಿಸುವವರ” ಸಂಖ್ಯೆಯೂ ಹೆಚ್ಚುವುದು. ಐಶ್ವರ್ಯವಂತನು ಅದನ್ನು ಕಣ್ಣಿಂದ ನೋಡಬಹುದಷ್ಟೇ ಹೊರತು ಬೇರೆ ಯಾವ ಲಾಭವೂ ಅವನಿಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೊತ್ತು ಹೆಚ್ಚಿದರೆ, ಅದನ್ನು ಅನುಭವಿಸುವವರು ಹೆಚ್ಚಾಗುವರು. ಯಜಮಾನರು ಅದನ್ನು ತಮ್ಮ ಕಣ್ಣಿಂದ ನೋಡುವುದೇ ಅವರಿಗಾಗುವ ಲಾಭ, ಬೇರೆ ಯಾವ ಪ್ರಯೋಜನವಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:11
16 ತಿಳಿವುಗಳ ಹೋಲಿಕೆ  

ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ಬಗೆಬಗೆಯಾಗಿ ಬಯಸುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದೇ ಲೇಸು. ಆದರೆ ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ನಿರರ್ಥಕ.


ಈಗ ಅವನಿಗೆ ಪಶುಪ್ರಾಣಿಗಳಿದ್ದವು. ಬೆಳ್ಳಿಬಂಗಾರವಿತ್ತು. ಅವನೀಗ ಘನಧನವಂತನಾಗಿದ್ದನು.


ಅವನು ಆಕೆಯನ್ನು ಅರಮನೆಗೆ ಕರೆಸಿದನು. ಆಕೆಯ ನಿಮಿತ್ತ ಅಬ್ರಾಮನಿಗೆ ಸತ್ಕಾರ ದೊರಕಿತು; ಕುರಿಮೇಕೆಗಳು, ದನಕರುಗಳು, ಗಂಡುಹೆಣ್ಣು ಕತ್ತೆಗಳು, ದಾಸದಾಸಿಯರು ಹಾಗು ಒಂಟೆಗಳು ದೊರೆತವು.


ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


ಹೀಗೆ ಜೆರುಸಲೇಮಿನಲ್ಲಿ ಹಿಂದೆ ಇದ್ದ ಎಲ್ಲರಿಗಿಂತಲೂ ಅಭಿವೃದ್ಧಿಹೊಂದಿ ಶ್ರೀಮಂತನಾದೆ.


ದುಡಿಯುವವನು ಸ್ವಲ್ಪ ತಿಂದರೂ ಸರಿ, ಹೆಚ್ಚು ತಿಂದರೂ ಸರಿ, ಹಾಯಾಗಿ ನಿದ್ರಿಸುತ್ತಾನೆ. ಐಶ್ವರ್ಯವಂತನ ಸಂಪತ್ತಾದರೋ ಅವನಿಗೆ ನಿದ್ರೆ ಬರಲು ಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು