ಪ್ರಸಂಗಿ 5:12 - ಕನ್ನಡ ಸತ್ಯವೇದವು C.L. Bible (BSI)12 ದುಡಿಯುವವನು ಸ್ವಲ್ಪ ತಿಂದರೂ ಸರಿ, ಹೆಚ್ಚು ತಿಂದರೂ ಸರಿ, ಹಾಯಾಗಿ ನಿದ್ರಿಸುತ್ತಾನೆ. ಐಶ್ವರ್ಯವಂತನ ಸಂಪತ್ತಾದರೋ ಅವನಿಗೆ ನಿದ್ರೆ ಬರಲು ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದುಡಿಯುವವನು ಸ್ವಲ್ಪವೇ ತಿನ್ನಲಿ ಹೆಚ್ಚೇ ತಿನ್ನಲಿ, ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನಿಗೆ ನಿದ್ರೆ ಮಾಡಗೊಡಿಸದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದುಡಿಯುವವನು ಸ್ವಲ್ಪವೇ ಉಣ್ಣಲಿ ಹೆಚ್ಚೇ ಉಣ್ಣಲಿ ಹಾಯಾಗಿ ನಿದ್ರಿಸುವನು; ಐಶ್ವರ್ಯವಂತನ ಸಮೃದ್ಧಿಯೋ ಅವನಿಗೆ ನಿದ್ರೆ ಬರಲೀಸದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದಿನವೆಲ್ಲಾ ಪ್ರಯಾಸಪಟ್ಟು ದುಡಿಯುವವನು ಸಮಾಧಾನದಿಂದ ಮಲಗಿಕೊಳ್ಳುವನು. ಅವನಿಗೆ ತಿನ್ನಲು ಸ್ವಲ್ಪವೇ ಇರಲಿ ಅಥವಾ ಹೆಚ್ಚೇ ಇರಲಿ, ಅದು ಮುಖ್ಯವಲ್ಲ. ಐಶ್ವರ್ಯವಂತನಿಗಾದರೋ ತನ್ನ ಸಂಪತ್ತಿನ ಕುರಿತು ಚಿಂತಿಸುತ್ತಾ ನಿದ್ರಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪ್ರಯಾಸ ಪಡುವವನು ಸ್ವಲ್ಪ ತಿಂದರೂ ಹೆಚ್ಚು ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆ ಮಾಡಗೊಡಿಸದು. ಅಧ್ಯಾಯವನ್ನು ನೋಡಿ |