Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:13 - ಕನ್ನಡ ಸತ್ಯವೇದವು C.L. Bible (BSI)

13 ಲೋಕದಲ್ಲಿ ನಾನು ಮತ್ತೊಂದು ಕೇಡನ್ನು ಕಂಡೆ. ಅದೇನೆಂದರೆ, ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲೇ ಕೊರಗುತ್ತಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಲೋಕದಲ್ಲಿ ಕೇವಲ ಈ ದುರ್ದಶೆಯನ್ನು ನೋಡಿದೆನು; ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವದರಲ್ಲಿಯೇ ಕೊರಗುತ್ತಿರುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಲೋಕದಲ್ಲಿ ದುರ್ಗತಿಯೊಂದನ್ನು ನೋಡಿದ್ದೇನೆ. ಒಬ್ಬನು ತನ್ನ ಭವಿಷ್ಯತ್ತಿಗಾಗಿ ಹಣವನ್ನು ಕೂಡಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ: ಸಂಗ್ರಹಿಸಿದ ಆಸ್ತಿ ಯಜಮಾನನಿಗೆ ಹಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:13
29 ತಿಳಿವುಗಳ ಹೋಲಿಕೆ  

ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಈ ಲೋಕದಲ್ಲಿ ನಡೆಯುವ ಆಗುಹೋಗುಗಳನ್ನೆಲ್ಲ ಚಿಂತಿಸಿ ನೋಡಿದಾಗ ಈ ವಿಷಯಗಳು ಕಂಡುಬಂದವು: ಈಗ ಒಬ್ಬನು ಮತ್ತೊಬ್ಬನ ಮೇಲೆ ದಬ್ಬಾಳಿಕೆ ನಡೆಸುತ್ತಾನೆ; ಹಾನಿಯನ್ನು ಉಂಟುಮಾಡುತ್ತಾನೆ.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ಸೂರೆ ಮಾಡುವವರೆಲ್ಲರ ಪಾಡು ಇದುವೆ; ಕೊಳ್ಳೆಯು, ಕೊಳ್ಳೆಗಾರರ ಪ್ರಾಣವನ್ನೇ ಕೊಳ್ಳೆಮಾಡುತ್ತದೆ.


ಆ ರಾಜರು ಅಪಹರಿಸಿದ್ದ ಎಲ್ಲ ವಸ್ತುಗಳನ್ನು ಕಿತ್ತುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನು ಬಿಡುಗಡೆಮಾಡಿದನು; ಅವನ ಆಸ್ತಿಪಾಸ್ತಿಯನ್ನು, ಸೆರೆಯಲ್ಲಿದ್ದ ಮಹಿಳೆಯರನ್ನು ಮತ್ತು ಇತರರನ್ನು ಬಿಡಿಸಿಕೊಂಡು ಹಿಂದಿರುಗಿದನು.


ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ಲೋಟನ ಹೆಂಡತಿಯೋ, ಅವನ ಹಿಂದೆ ಬರುತ್ತಿದ್ದಾಗ ಹಿಂದಿರುಗಿ ನೋಡಿದಳು; ಕೂಡಲೇ ಉಪ್ಪಿನ ಕಂಬವಾಗಿ ಮಾರ್ಪಟ್ಟಳು.


ಅವನ ಆಕಾಂಕ್ಷೆಗೆ ತೃಪ್ತಿಯೇ ಇಲ್ಲ ಅವನ ಸಿರಿಸಂಪತ್ತು ಅವನನ್ನು ರಕ್ಷಿಸುವುದಿಲ್ಲ.


ಆ ಆಸ್ತಿ ನಿರರ್ಥಕ ಪ್ರಯತ್ನದಿಂದ ನಷ್ಟವಾಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.


ದುಡ್ಡಿನಾಸೆಗಾಗಿಯೆ ದುಡಿಯಬೇಡ; ಬುದ್ಧಿಯನ್ನೆಲ್ಲಾ ಅದಕ್ಕಾಗಿಯೇ ವ್ಯಯಮಾಡಬೇಡ.


ಸಿರಿಸಂಪತ್ತು ಶಾಶ್ವತವಲ್ಲ; ಕಿರೀಟ ತಲತಲಾಂತರಕ್ಕೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು