Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:2 - ಕನ್ನಡ ಸತ್ಯವೇದವು C.L. Bible (BSI)

2 ದುಡುಕಿ ಮಾತನಾಡಬೇಡ. ದೇವರ ಸನ್ನಿಧಿಯಲ್ಲಿ ಮಾತುಕೊಡಲು ಆತುರಪಡಬೇಡ. ದೇವರು ಇರುವುದು ಪರಲೋಕದಲ್ಲಿ, ನೀನಿರುವುದಾದರೋ ಭೂಲೋಕದಲ್ಲಿ. ಆದುದರಿಂದ ನಿನ್ನ ಮಾತುಗಳಿಗೆ ಮಿತಿಯಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಾಯಿದುಡುಕಬೇಡ, ದೇವರ ಮುಂದೆ ಮಾತಾಡಲು ನಿನ್ನ ಹೃದಯದಲ್ಲಿ ಆತುರಪಡದಿರು; ದೇವರು ಆಕಾಶದಲ್ಲಿದ್ದಾನಲ್ಲವೆ, ನೀನು ಭೂವಿುಯಲ್ಲಿದ್ದೀ; ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರಿಗೆ ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ. ನೀವು ದೇವರೊಂದಿಗೆ ಮಾತಾಡುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಮನೋದ್ವೇಗಗಳು ನಿಮ್ಮನ್ನು ಮಾತಿನಲ್ಲಿ ದುಡುಕಿಸದಂತೆ ನೋಡಿಕೊಳ್ಳಿ. ದೇವರು ಪರಲೋಕದಲ್ಲಿರುವುದರಿಂದ ಮತ್ತು ನೀವು ಈ ಲೋಕದಲ್ಲಿರುವುದರಿಂದ ನಿಮ್ಮ ಮಾತುಗಳು ಮಿತವಾಗಿರಲಿ. ಈ ನುಡಿ ಸತ್ಯವಾದದ್ದೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:2
21 ತಿಳಿವುಗಳ ಹೋಲಿಕೆ  

“ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.


ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.


“ಎಷ್ಟೋ ಉನ್ನತ ಆಕಾಶವು ಭೂಮಿಯಿಂದ ಅಷ್ಟೂ ಉನ್ನತ ನನ್ನ ಮಾರ್ಗ ನಿಮ್ಮ ಮಾರ್ಗಗಳಿಗಿಂತ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ.


ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:


ಕನಸುಗಳು ಎಷ್ಟೋ ಬೀಳಬಹುದು. ಮಾತುಕತೆಗಳು ಎಷ್ಟೋ ನಡೆಯಬಹುದು. ನೀನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.


ಆಗ ಅಬ್ರಹಾಮನು, “ನಾನಂತೂ ಮಣ್ಣುಬೂದಿ, ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಚಿಂತೆ ಹೆಚ್ಚಾದರೆ ಕನಸು ಕಾಣಿಸಿಕೊಳ್ಳುತ್ತದೆ. ಮಾತು ಹೆಚ್ಚಾದರೆ ಹುಚ್ಚುತನ ಹೊರಬರುತ್ತದೆ.


ದುಡುಕಿ ದೇವರಿಗೆ ಮುಡಿಪುಕಟ್ಟುವುದು, ಹರಕೆ ಹೊತ್ತ ಮೇಲೆ ವಿಚಾರಮಾಡುವುದು, ಉರುಳಿಗೆ ಸಿಕ್ಕಿಕೊಂಡಂತೆ ಆಗುವುದು.


ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು,


ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II


ಅಬ್ರಹಾಮನು, “ಸ್ವಾಮೀ, ಸಿಟ್ಟುಗೊಳ್ಳಬೇಡಿ; ಇನ್ನು ಒಂದೇ ಒಂದು ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತೇ ಮಂದಿ ಸಿಕ್ಕಾರು” ಎನ್ನಲು, ಸರ್ವೇಶ್ವರ, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.


ಅಬ್ರಹಾಮನು, “ಸ್ವಾಮೀ, ಕೋಪಮಾಡಬೇಡಿ; ಇನ್ನೂ ಮಾತಾಡುತ್ತೇನೆ. ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಸರ್ವೇಶ್ವರ, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೂ ಅದನ್ನು ನಾಶಮಾಡುವುದಿಲ್ಲ,” ಎಂದರು.


ಇದಲ್ಲದೆ ಅವನು ಸರ್ವೇಶ್ವರಸ್ವಾಮಿಗೆ, “ತಾವು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ


ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನುಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.”


“ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.


ಜ್ಞಾನಿಯ ಮಾತು ಹಿತಕರ; ಅಜ್ಞಾನಿಯ ಮಾತು ಅವನಿಗೆ ವಿನಾಶಕರ. ಅದು ಬುದ್ಧಿಹೀನತೆಯಿಂದ ಆರಂಭವಾಗುತ್ತದೆ. ಮೋಸ, ಮರುಳುತನದಲ್ಲಿ ಮುಕ್ತಾಯಗೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು