Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:20 - ಕನ್ನಡ ಸತ್ಯವೇದವು C.L. Bible (BSI)

20 ಇಂಥವನು ತನ್ನ ಜೀವನಾವಧಿಯನ್ನು ಗಣನೆಗೆ ತಂದುಕೊಳ್ಳನು. ಕಾರಣ, ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಂದುಕೊಳ್ಳುವುದಿಲ್ಲ. ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಂಥವನು ತನ್ನ ಜೀವಮಾನದ ದಿನಗಳನ್ನು ಹೆಚ್ಚಾಗಿ ಗಣನೆಗೆ ತಾರನು; ಇವನು ತನ್ನ ಹೃದಯಾನಂದದಲ್ಲಿ ಮಗ್ನನಾಗಿರುವಂತೆ ದೇವರು ಮಾಡಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ತನ್ನ ಜೀವಿತವು ಅಲ್ಪಕಾಲದ್ದೆಂದು ಅವನು ನೆನಪುಮಾಡಿಕೊಳ್ಳಬೇಕು. ಯಾಕೆಂದರೆ ಅವನನ್ನು ಅವನಿಗೆ ಇಷ್ಟವಾದ ಕೆಲಸದಲ್ಲಿ ನಿರತನನ್ನಾಗಿ ಮಾಡಿರುವಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಂಥವನು ತನ್ನ ಜೀವಮಾನದ ದಿನಗಳನ್ನು ಗಣನೆಗೆ ತಂದುಕೊಳ್ಳನು. ಏಕೆಂದರೆ ಇವನು ತನ್ನ ಹೃದಯಾನಂದದಲ್ಲಿ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:20
12 ತಿಳಿವುಗಳ ಹೋಲಿಕೆ  

ದುರುಳರ ವಿಪುಲ ಆಸ್ತಿಪಾಸ್ತಿಗಿಂತಲು I ಸತ್ಯವಂತರ ಬಡತನವೆನಿತೊ ಮಿಗಿಲು II


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


“ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಹರ್ಷಾನಂದದಿಂದ ಸೇವೆಮಾಡದೆಹೋದಿರಿ.


ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?


ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನೊಬ್ಬನನ್ನೇ ಆರಾಧಿಸಬೇಕು. ಆಗ ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವೆನು. ನಿಮ್ಮೊಳಗೆ ಯಾವ ವ್ಯಾಧಿಯೂ ಇರದಂತೆ ಮಾಡುವೆನು.


ಧರೆಯಲ್ಲಿ ಮಾನವರಿಗೆ ಬಂದೊದಗುವ ದೊಡ್ಡ ದುರವಸ್ಥೆ ಒಂದನ್ನು ಕಂಡೆ.


ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು