Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:5 - ಕನ್ನಡ ಸತ್ಯವೇದವು C.L. Bible (BSI)

5 ಹರಕೆಮಾಡಿ ತೀರಿಸದೆ ಇರುವುದಕ್ಕಿಂತ ಹರಕೆ ಮಾಡಿಕೊಳ್ಳದಿರುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ಹರಕೆಮಾಡಿದ್ದನ್ನು ನೆರವೇರಿಸದೆ ಇರುವುದಕ್ಕಿಂತ ಹರಕೆಮಾಡದೆ ಇರುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಹರಸಿಕೊಂಡು ತೀರಿಸದೆ ಇರುವದಕ್ಕಿಂತ ಹರಕೆ ಮಾಡಿಕೊಳ್ಳದೆ ಇರುವದು ವಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹರಕೆ ಮಾಡಿ ಸಲ್ಲಿಸದಿರುವುದಕ್ಕಿಂತ ಹರಕೆ ಮಾಡದಿರುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹರಕೆಮಾಡಿ ತೀರಿಸದೆ ಇರುವುದಕ್ಕಿಂತ, ಹರಕೆ ಮಾಡದೆ ಇರುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:5
8 ತಿಳಿವುಗಳ ಹೋಲಿಕೆ  

ಮಾರುವುದಕ್ಕೆ ಮೊದಲು ಆಸ್ತಿ ನಿನಗೇ ಸೇರಿತ್ತು; ಮಾರಿದ ನಂತರವೂ ಅದರ ಹಣ ನಿನ್ನದೇ ಆಗಿತ್ತು. ಹೀಗಿರುವಲ್ಲಿ ಇಂಥಾ ದುಷ್ಟಯೋಚನೆ ಮಾಡಲು ನೀನೇಕೆ ಮನಸ್ಸುಮಾಡಿದೆ? ನೀನು ಸುಳ್ಳಾಡಿರುವುದು ಮನುಷ್ಯರಿಗಲ್ಲ, ದೇವರಿಗೆ,” ಎಂದನು.


ದುಡುಕಿ ದೇವರಿಗೆ ಮುಡಿಪುಕಟ್ಟುವುದು, ಹರಕೆ ಹೊತ್ತ ಮೇಲೆ ವಿಚಾರಮಾಡುವುದು, ಉರುಳಿಗೆ ಸಿಕ್ಕಿಕೊಂಡಂತೆ ಆಗುವುದು.


ನೀವು ಹರಕೆಮಾಡದಿದ್ದರೆ ದೋಷವೇನೂ ಇಲ್ಲ.


“ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.


ಆಕೆಯನ್ನು ಕಾಣುತ್ತಲೆ ಅವನು ದುಃಖತಾಳಲು ಆಗದೆ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ ನನ್ನ ಮಗಳೇ, ನೀನು ನನ್ನನ್ನು ಎಂಥಾ ಯಾತನೆಗೆ ಈಡುಮಾಡಿದೆ; ನನಗೆ ಮಹಾಸಂಕಟವನ್ನುಂಟುಮಾಡಿದೆ! ನಾನು ಬಾಯಾರೆ ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾಗದು,” ಎಂದು ಕೂಗಿಕೊಂಡನು.


ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.”


“ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು