Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:7 - ಕನ್ನಡ ಸತ್ಯವೇದವು C.L. Bible (BSI)

7 ಕನಸುಗಳು ಎಷ್ಟೋ ಬೀಳಬಹುದು. ಮಾತುಕತೆಗಳು ಎಷ್ಟೋ ನಡೆಯಬಹುದು. ನೀನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಹಳ ಕನಸುಗಳಿಂದಲೂ, ವ್ಯರ್ಥ ವಿಷಯಗಳಿಂದಲೂ, ಹೆಚ್ಚು ಮಾತುಗಳಿಂದಲೂ ವ್ಯರ್ಥವೇ. ನೀನಂತೂ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಹಳ ಕನಸುಗಳಿಂದಲೂ ವ್ಯರ್ಥವಿಷಯಗಳಿಂದಲೂ ಹೆಚ್ಚು ಮಾತುಗಳು ಹೊರಡುತ್ತವಷ್ಟೆ; ನೀನಂತು ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಉಪಯೋಗವಿಲ್ಲದ ನಿಮ್ಮ ಕನಸುಗಳಾಗಲಿ ಜಂಬದ ಮಾತುಗಳಾಗಲಿ ನಿಮ್ಮನ್ನು ಕೇಡಿಗೆ ನಡೆಸದಂತೆ ನೋಡಿಕೊಳ್ಳಿರಿ; ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಹು ಕನಸುಗಳೂ ಬಹು ಮಾತುಗಳೂ ವ್ಯರ್ಥವಾದವುಗಳು. ಆದ್ದರಿಂದ ನೀನು ದೇವರಿಗೆ ಭಯಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:7
11 ತಿಳಿವುಗಳ ಹೋಲಿಕೆ  

ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ಚಿಂತೆ ಹೆಚ್ಚಾದರೆ ಕನಸು ಕಾಣಿಸಿಕೊಳ್ಳುತ್ತದೆ. ಮಾತು ಹೆಚ್ಚಾದರೆ ಹುಚ್ಚುತನ ಹೊರಬರುತ್ತದೆ.


ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ.


ಪಾಪಿಗಳನ್ನು ನೋಡಿ ಅಸೂಯೆಪಡಬೇಡ; ಸರ್ವೇಶ್ವರನಲ್ಲಿರಲಿ ನಿರಂತರ ಭಯಭಕ್ತಿ.


ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.


ದೇವರಿಗೆ ಹೆದರದ ದುರ್ಜನನಿಗೆ ಒಳ್ಳೆಯದಾಗದೆಂಬುದು ನಿಶ್ಚಯ. ನೆರಳಿನಂತಿರುವ ಅವನ ಬಾಳಿನ ದಿನಗಳು ಹೆಚ್ಚುವುದಿಲ್ಲ.


ಇದಲ್ಲದೆ, ನಾನು ಲೋಕವನ್ನು ದೃಷ್ಟಿಸಿನೋಡಿ ನ್ಯಾಯಸ್ಥಾನದಲ್ಲೂ ಧರ್ಮಸ್ಥಾನದಲ್ಲೂ ಅಧರ್ಮ ಇರುವುದನ್ನು ಗಮನಿಸಿದೆ.


ಈ ಲೋಕದಲ್ಲಿ ನಡೆಯುವ ಆಗುಹೋಗುಗಳನ್ನೆಲ್ಲ ಚಿಂತಿಸಿ ನೋಡಿದಾಗ ಈ ವಿಷಯಗಳು ಕಂಡುಬಂದವು: ಈಗ ಒಬ್ಬನು ಮತ್ತೊಬ್ಬನ ಮೇಲೆ ದಬ್ಬಾಳಿಕೆ ನಡೆಸುತ್ತಾನೆ; ಹಾನಿಯನ್ನು ಉಂಟುಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು