Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:8 - ಕನ್ನಡ ಸತ್ಯವೇದವು C.L. Bible (BSI)

8 ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:8
60 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಇದಲ್ಲದೆ, ನಾನು ಲೋಕವನ್ನು ದೃಷ್ಟಿಸಿನೋಡಿ ನ್ಯಾಯಸ್ಥಾನದಲ್ಲೂ ಧರ್ಮಸ್ಥಾನದಲ್ಲೂ ಅಧರ್ಮ ಇರುವುದನ್ನು ಗಮನಿಸಿದೆ.


ಸ್ವರ್ಗಸಭೆಯಲಿ ದೇವ ಅಗ್ರಸ್ಥಾನ ವಹಿಸಿಹನು I ದೇವರುಗಳ ಸಮೂಹದಲಿ ನ್ಯಾಯವಿಚಾರಿಸುತಿಹನು II


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ.” ಇದು ಸರ್ವೇಶ್ವರನ ನುಡಿ.


ನನ್ನ ಜನಾಂಗಕ್ಕೆ ಸೇರಿದ ಮಹಿಳೆಯರನ್ನು ಪ್ರಿಯವಾದ ಅವರ ಗೃಹಗಳಿಂದ ಹೊರದಬ್ಬುತ್ತೀರಿ. ಅವರ ಹಸುಳೆಗಳಿಗೆ ನನ್ನ ಆಶೀರ್ವಾದ ಇನ್ನೆಂದಿಗೂ ಲಭಿಸದಂತೆ ಮಾಡುತ್ತೀರಿ.


ಕಲ್ಲುಬಂಡೆಗಳ ಮೇಲೆ ಕುದುರೆಗಳು ಓಡಾಡುವುದುಂಟೋ? ಎತ್ತು ಹೋರಿಗಳಿಂದ ಕಡಲನ್ನು ಉಳುವುದುಂಟೋ? ನೀವೋ, ವಿಷವನ್ನಾಗಿಸಿದ್ದೀರಿ ನ್ಯಾಯನೀತಿಯನ್ನು, ಕಹಿಯಾಗಿಸಿದ್ದೀರಿ ಧರ್ಮದ ಸತ್ಫಲವನ್ನು.


ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ನೀವು ನನ್ನ ಜನರನ್ನು ನಸುಕಿಬಿಟ್ಟಿದ್ದೀರಲ್ಲವೇ? ಬಡವರನ್ನು ಹಿಸುಕಿಬಿಟ್ಟಿದ್ದೀರಲ್ಲವೇ?” ಎಂದು ಸೇನಾಧೀಶ್ವರ ಸರ್ವೇಶ್ವರಸ್ವಾಮಿ ವಾದಿಸುತ್ತಾರೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ಏಕೆಂದರೆ ಪ್ರಭು ದೇವಾಧಿದೇವನು I ದೇವರುಗಳಲೆಲ್ಲ ರಾಜಾಧಿರಾಜನು II


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ಭ್ರಾಂತಗೊಳಿಸು ಶತ್ರುವನು, ಗಲಿಬಿಲಿಗೊಳಿಸು ಅವರ ನುಡಿಯನು I ನಗರದಲಿ ನಾ ಕಾಣುತ್ತಿರುವೆ ಪ್ರಭೂ, ಹಿಂಸೆ ಕಲಹವನು II


ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿ.


ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಹಣ ಹೆಚ್ಚಿಸಲು ಬಡವರನ್ನು ಪೀಡಿಸುವವನಿಗೆ, ಲಂಚಕೊಟ್ಟು ಬಲ್ಲಿದರನ್ನು ಒಲಿಸುವವನಿಗೆ, ಕೊರತೆಯೆ ಕಟ್ಟಿಟ್ಟ ಬುತ್ತಿ.


ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?


:ಸಾರ್ವಜನಿಕ ಒಳಿತು,” “ಅಧಿಪತಿಗಳ ಸೇವೆ” ಎಂದೆಲ್ಲ ಹೇಳುವರು.


ದಬ್ಬಾಳಿಕೆ ಬುದ್ಧಿವಂತನನ್ನೂ ಹುಚ್ಚನನ್ನಾಗಿಸುತ್ತದೆ; ಲಂಚಕೋರತನ ಅಂತರಂಗವನ್ನೂ ಕೆಡಿಸುತ್ತದೆ.


ಈ ಲೋಕದಲ್ಲಿ ನಡೆಯುವ ಆಗುಹೋಗುಗಳನ್ನೆಲ್ಲ ಚಿಂತಿಸಿ ನೋಡಿದಾಗ ಈ ವಿಷಯಗಳು ಕಂಡುಬಂದವು: ಈಗ ಒಬ್ಬನು ಮತ್ತೊಬ್ಬನ ಮೇಲೆ ದಬ್ಬಾಳಿಕೆ ನಡೆಸುತ್ತಾನೆ; ಹಾನಿಯನ್ನು ಉಂಟುಮಾಡುತ್ತಾನೆ.


ಇವನ ತಂದೆಯಾದರೊ ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದ್ದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು.


ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು