Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:12 - ಕನ್ನಡ ಸತ್ಯವೇದವು C.L. Bible (BSI)

12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮಾನವನ ಜೀವಮಾನ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಹಿತವೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಳ್ಳಲು ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವದು ಮೇಲೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವದೆಂದು ಅವನು ಯಾರಿಂದ ತಿಳಿದುಕೊಂಡಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮನುಷ್ಯನ ಅಲ್ಪಕಾಲದ ಜೀವನದಲ್ಲಿ ಅವನಿಗೆ ಯಾವುದು ಉತ್ತಮವೆಂದು ಯಾರಿಗೆ ಗೊತ್ತು? ಅವನ ಜೀವನವು ನೆರಳಿನಂತೆ ಕಳೆದುಹೋಗುವುದು. ಮುಂದೆ ಏನಾಗುವುದೆಂದು ಯಾರೂ ಅವನಿಗೆ ಹೇಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:12
28 ತಿಳಿವುಗಳ ಹೋಲಿಕೆ  

ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಅರಳಿ ಬಾಡುವನು ಹೂವಿನಂತೆ ನಿಲ್ಲದೆ ಓಡುವನು ನೆರಳಿನಂತೆ.


ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II


ದೇವರಿಗೆ ಹೆದರದ ದುರ್ಜನನಿಗೆ ಒಳ್ಳೆಯದಾಗದೆಂಬುದು ನಿಶ್ಚಯ. ನೆರಳಿನಂತಿರುವ ಅವನ ಬಾಳಿನ ದಿನಗಳು ಹೆಚ್ಚುವುದಿಲ್ಲ.


ಮುಂದೆ ಆಗುವುದೇನು ಎಂಬುದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಸಂಭವಿಸುವುದು ಎಂದು ಅವನಿಗೆ ತಿಳಿಸಬಲ್ಲವರು ಯಾರೂ ಇಲ್ಲ.


ನಾವಾದರೋ ನಿನ್ನೆ ಹುಟ್ಟಿದವರು, ಏನೂ ಅರಿಯದವರು ಭೂಲೋಕದಲ್ಲಿನ ನಮ್ಮ ಬಾಳು ಕೇವಲ ನೆರಳು.


ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ಅವರ ಪ್ರೀತಿ, ದ್ವೇಷ, ಮತ್ಸರ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಇಹಲೋಕದಲ್ಲಿ ನಡೆಯುವ ಯಾವುದರಲ್ಲೂ ಅವರಿಗೆ ಇನ್ನೆಂದಿಗೂ ಪಾಲಿರುವುದಿಲ್ಲ.


ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.


ನಾ ಗತಿಸಿಹೋಗುತ್ತಿರುವೆ ಬೈಗಿನ ನೆರಳಂತೆ I ಬಿರುಗಾಳಿ ಕೊಂಡೊಯ್ಯುವ ಮಿಡತೆಯಂತೆ II


ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ಅವನ ಮಕ್ಕಳು ಪ್ರಗತಿಹೊಂದಿದರೂ ಅವನಿಗೆ ತಿಳಿಯದು ಅವರು ಅಧೋಗತಿಗೆ ಇಳಿದರೂ ಅವನಿಗೆ ಗೋಚರವಾಗದು.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II


ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ II


ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II


ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.


ಮಾತು ಹೆಚ್ಚಿದಷ್ಟೂ ಪರಿಣಾಮ ಕಡಿಮೆ. ಅದರಿಂದ ಮನುಷ್ಯನಿಗಾಗುವ ಪ್ರಯೋಜನವಾದರೂ ಏನು?


ಸಜ್ಜನನು ಸದ್ಧರ್ಮಿಯಾಗಿ ಜೀವಿಸುತ್ತಾ ಗತಿಸಿಹೋಗುತ್ತಾನೆ; ದುರ್ಜನನಾದರೋ ಅಧರ್ಮದಲ್ಲಿ ಬಹುಕಾಲ ಬದುಕುತ್ತಾನೆ. ಇದನ್ನು ಎಲ್ಲಾ ನನ್ನ ನಿರರ್ಥಕ ಜೀವನದಲ್ಲಿ ಎಷ್ಟೋ ನೋಡಿದ್ದೇನೆ.


ಲೋಕದಲ್ಲಿ ದೇವರು ವಿಧಿಸಿರುವ ಈ ನಿರರ್ಥಕ ಜೀವಮಾನದ ನಿರರ್ಥಕ ದಿನದಿನವೂ ನಿನ್ನ ಪ್ರಿಯ ಪತ್ನಿಯೊಡನೆ ಸುಖದಿಂದ ಬದುಕು; ಇಹಲೋಕದ ನಿನ್ನ ಬಾಳಿನಲ್ಲಿ ನೀನು ಪಡುವ ಪಾಡಿಗೆ ಇದೇ ನಿನ್ನ ಪಾಲಿಗೆ ಬಂದ ಪಂಚಾಮೃತ.


ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು