Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:3 - ಕನ್ನಡ ಸತ್ಯವೇದವು C.L. Bible (BSI)

3 ಒಬ್ಬನು ನೂರಾರು ಮಕ್ಕಳನ್ನು ಪಡೆಯಬಹುದು, ಹಣ್ಣುಹಣ್ಣು ಮುದುಕನಾಗುವ ತನಕ ಬದುಕಬಹುದು. ಆದರೆ ಜೀವನದಲ್ಲಿ ಸುಖಾನುಭವ ಇಲ್ಲದೆ, ಉತ್ತರಕ್ರಿಯೆಯೂ ಇಲ್ಲದೆಹೋದರೆ ಏನು ಪ್ರಯೋಜನ? ಅವನಿಗಿಂತ ಗರ್ಭಸ್ರಾವದ ಪಿಂಡವೇ ಮೇಲು ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹು ವರುಷ ಬದುಕಿದವನಿಗೆ ಸುಖ ತೃಪ್ತಿಯೂ ಉತ್ತರಕ್ರಿಯೆಯೂ ಇಲ್ಲದಿದ್ದರೆ ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಬ್ಬನು ಬಹುಕಾಲ ಬದುಕಬಹುದು. ಅವನಿಗೆ ನೂರು ಮಂದಿ ಮಕ್ಕಳಿರಬಹುದು. ಆದರೆ ಅವನಿಗೆ ಸುಖತೃಪ್ತಿಯೂ ಸತ್ತ ಮೇಲೆ ಉತ್ತರಕ್ರಿಯೆಯೂ ಇಲ್ಲದಿದ್ದರೆ ಹುಟ್ಟುವಾಗಲೇ ಸಾಯುವ ಮಗು ಅವನಿಗಿಂತಲೂ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಬ್ಬ ಮನುಷ್ಯನಿಗೆ ನೂರು ಮಕ್ಕಳಿರಬಹುದು ಮತ್ತು ಅವನು ಬಹಳ ವರ್ಷ ಬದುಕಿರಬಹುದು. ಅವನು ತನ್ನ ಐಶ್ವರ್ಯವನ್ನು ಅನುಭವಿಸದೆ, ಸರಿಯಾದ ಶವಸಂಸ್ಕಾರ ಇಲ್ಲದೆ ಹೋದರೆ ಅವನಿಗಿಂತಲೂ ಮೃತ ಸ್ಧಿತಿಯಲ್ಲಿ ಹುಟ್ಟಿರುವ ಕೂಸೇ ಮೇಲು ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:3
23 ತಿಳಿವುಗಳ ಹೋಲಿಕೆ  

ಗರ್ಭಸ್ರಾವವಾಗಿ ಬಿದ್ದು ಹೂಳಿಟ್ಟಪಿಂಡದಂತೆ ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಪ್ರಾಯಶಃ ಜನ್ಮವೇ ಇಲ್ಲದವನಾಗಿ ನಾನಿರುತ್ತಿದ್ದೆ.


ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”


ಹೌದು, ಉಭಯರಿಗಿಂತಲೂ ಇನ್ನೂ ಹುಟ್ಟದೆ, ಜಗದಲ್ಲಿನ ಅಧರ್ಮವನ್ನು ಕಾಣದೆ ಇರುವವನು ಮತ್ತಷ್ಟು ಭಾಗ್ಯವಂತನೆಂದು ತಿಳಿದುಕೊಂಡೆ.


ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳು ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


ಈ ಕಾರಣ ಜುದೇಯದ ಅರಸ ಯೆಹೋಯಾಕೀಮನು ಆದ ನಿನ್ನ ವಿರುದ್ಧ ಸರ್ವೇಶ್ವರ ಹೀಗೆನ್ನುತ್ತಾರೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು. ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ಇರುಳಿನ ಚಳಿಗೂ ಈಡಾಗುವುದು.


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಮಕ್ಕಳ ಮಕ್ಕಳು ಮುದುಕರ ಮುಕುಟ; ಮಕ್ಕಳಿಗೆ ಹೆತ್ತವರೇ ಭೂಷಣ.


ನುಸುಳಿ ನುಸುಳಿ ನಶಿಸಿಹೋಗಲಿ ಬಸವನ ಹುಳದಂತೆ I ರವಿಯ ಬೆಳಕನು ಕಾಣದಿರಲಿ ಗರ್ಭವಿಳಿದ ಪಿಂಡದಂತೆ II


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.


ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತ ಎಂಟು ಮಂದಿ ಗಂಡುಮಕ್ಕಳೂ ಅರವತ್ತು ಮಂದಿ ಹೆಣ್ಣು ಮಕ್ಕಳೂ ಹುಟ್ಟಿದರು.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ಸಮಾರಿಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಜೆಸ್ರೀಲಿನ ಅಧಿಕಾರಿಗಳಾದ ಹಿರಿಯರಿಗೂ ರಾಜಪುತ್ರಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರ ಕಳುಹಿಸಿದನು.


ಅವರಿಬ್ಬರ ಕಣ್ಣಲ್ಲೂ ನೀರು ಹರಿಯಿತು. ಬಳಿಕ ಏಸಾವನು ಕಣ್ಣೆತ್ತಿ ಆ ಮಹಿಳೆಯರನ್ನೂ ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ವಿಚಾರಿಸಿದನು. ಯಕೋಬನು, “ದೇವರು ನಿಮ್ಮ ದಾಸನಾದ ನನಗೆ ಅನುಗ್ರಹಿಸಿದ ಮಕ್ಕಳು ಇವರೇ” ಎಂದು ಹೇಳಿದನು.


ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲೇ ಮರೆಯಾಗುತ್ತದೆ. ಅದರ ಹೆಸರು ಕಾರಿರುಳು.


ಹುಟ್ಟುವಾಗಲೇ ನಾನೇಕೆ ಸಾಯಲಿಲ್ಲ? ಉದರದಿಂದ ಬಂದೊಡನೆ ನಾನೇಕೆ ಮಡಿಯಲಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು