Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:7 - ಕನ್ನಡ ಸತ್ಯವೇದವು C.L. Bible (BSI)

7 ಮಾನವನು ಪಡುವ ಪ್ರಯಾಸವೆಲ್ಲ ಅವನ ಹೊಟ್ಟೆಪಾಡಿಗಾಗಿಯೇ. ಆದರೂ ಅವನಿಗೆ ತೃಪ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮನುಷ್ಯನು ದುಡಿಯುವುದೆಲ್ಲಾ ಊಟಕ್ಕಾಗಿಯೇ. ಆದರೂ ಅವನಿಗೆ ತೃಪ್ತಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರತಿಯೊಬ್ಬನ ಪ್ರಯಾಸ ಅವನ ಹೊಟ್ಟೆಗಾಗಿಯೇ, ಆದರೆ ಅವನ ಹಸಿವು ತೃಪ್ತಿಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:7
11 ತಿಳಿವುಗಳ ಹೋಲಿಕೆ  

ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ದುಡಿಯುವವನು ಹೊಟ್ಟೆಪಾಡಿಗಾಗಿ ದುಡಿಯುತ್ತಾನೆ; ಹೊಟ್ಟೆಕಾಟವೆ ಸಾಕು ಅವನನ್ನು ದುಡಿಸಲಿಕ್ಕೆ.


“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ಒಬ್ಬನು ನೂರಾರು ಮಕ್ಕಳನ್ನು ಪಡೆಯಬಹುದು, ಹಣ್ಣುಹಣ್ಣು ಮುದುಕನಾಗುವ ತನಕ ಬದುಕಬಹುದು. ಆದರೆ ಜೀವನದಲ್ಲಿ ಸುಖಾನುಭವ ಇಲ್ಲದೆ, ಉತ್ತರಕ್ರಿಯೆಯೂ ಇಲ್ಲದೆಹೋದರೆ ಏನು ಪ್ರಯೋಜನ? ಅವನಿಗಿಂತ ಗರ್ಭಸ್ರಾವದ ಪಿಂಡವೇ ಮೇಲು ಎಂದುಕೊಂಡೆ.


ಹಣದಾಸೆಯುಳ್ಳವನಿಗೆ ಎಷ್ಟು ಹಣ ಇದ್ದರೂ ತೃಪ್ತಿಯಿಲ್ಲ. ಆಸ್ತಿ ಬಯಸುವವನಿಗೆ ಎಷ್ಟು ಆದಾಯವಿದ್ದರೂ ನೆಮ್ಮದಿಯಿಲ್ಲ. ಇದೂ ಸಹ ವ್ಯರ್ಥವೇ.


ಜ್ಞಾನಿಯಾಗಲಿ, ಜನರ ಮುಂದೆ ಸಜ್ಜನನಾಗಿ ನಡೆಯಬಲ್ಲ ಬಡವನಾಗಲಿ, ಮೂಢನಿಗಿಂತ ಹೇಗೆ ಶ್ರೇಷ್ಠ?


ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ.


:ಸಾರ್ವಜನಿಕ ಒಳಿತು,” “ಅಧಿಪತಿಗಳ ಸೇವೆ” ಎಂದೆಲ್ಲ ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು