Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:8 - ಕನ್ನಡ ಸತ್ಯವೇದವು C.L. Bible (BSI)

8 ಜ್ಞಾನಿಯಾಗಲಿ, ಜನರ ಮುಂದೆ ಸಜ್ಜನನಾಗಿ ನಡೆಯಬಲ್ಲ ಬಡವನಾಗಲಿ, ಮೂಢನಿಗಿಂತ ಹೇಗೆ ಶ್ರೇಷ್ಠ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ ಬಡವನಿಗೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜ್ಞಾನಿಯಾಗಲಿ ಜನರ ಮುಂದೆ ಸರಿಯಾಗಿ ನಡೆಯಬಲ್ಲ ಬಡವನಾಗಲಿ ಮೂಢನಿಗಿಂತ ಯಾವ ವಿಷಯದಲ್ಲಿ ಶ್ರೇಷ್ಠ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಜ್ಞಾನಿಯು ಮೂಢನಿಗಿಂತ ಉತ್ತಮನಲ್ಲ. ಬಡವರಾಗಿದ್ದರೂ ಜೀವನವನ್ನು ಅರ್ಥಮಾಡಿಕೊಂಡು ಜೀವಿಸುವುದೇ ಮೇಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಇತರರ ಮುಂದೆ ಹೇಗೆ ವರ್ತಿಸಬೇಕು ಎಂದು ತಿಳಿದುಕೊಳ್ಳುವುದರಿಂದ ಬಡವರಿಗೇನು ಲಾಭ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:8
9 ತಿಳಿವುಗಳ ಹೋಲಿಕೆ  

ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಸಿರಿಸಂಪತ್ತು ಹೆಚ್ಚಿದಂತೆ ಅನುಭವಿಸುವವರ ಸಂಖ್ಯೆಯೂ ಹೆಚ್ಚುತ್ತದೆ. ಯಜಮಾನನಿಗೆ ತಾನು ಐಶ್ವರ್ಯವಂತನೆಂಬ ಭಾವನೆಯ ಹೊರತು ಮತ್ತಾವ ಲಾಭವು ಇಲ್ಲ.


ಎಂದೇ ನಡೆವೆನು ನಾನು ಪ್ರಭುವಿನ ಕಣ್ಮುಂದೆ I ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ II


ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ಬಗೆಬಗೆಯಾಗಿ ಬಯಸುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದೇ ಲೇಸು. ಆದರೆ ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ನಿರರ್ಥಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು