Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:9 - ಕನ್ನಡ ಸತ್ಯವೇದವು C.L. Bible (BSI)

9 ಬಗೆಬಗೆಯಾಗಿ ಬಯಸುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದೇ ಲೇಸು. ಆದರೆ ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಗೆಬಗೆಯಾಗಿ ಆಶಿಸುವದಕ್ಕಿಂತ ಕಣ್ಣೆದುರಿಗಿರುವದನ್ನು ಅನುಭವಿಸುವದೇ ಲೇಸು; ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದುರಾಶೆಪಡುವುದಕ್ಕಿಂತ ಇರುವುದರಲ್ಲಿ ಸಂತೋಷಪಡುವುದೇ ಉತ್ತಮ. ದುರಾಶೆಯಿಂದ ಪ್ರಯೋಜನವಿಲ್ಲ. ಅದು ಸಹ ಗಾಳಿಯನ್ನು ಹಿಂದಟ್ಟಿದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೆಚ್ಚು ಅಪೇಕ್ಷಿಸಿ ಅಲೆದಾಡುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದು ಉತ್ತಮ. ಗಾಳಿಯನ್ನು ಬೆನ್ನಟ್ಟಿದಂತೆ ಇದೂ ಕೂಡ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:9
13 ತಿಳಿವುಗಳ ಹೋಲಿಕೆ  

ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ.


ದಾರಿತಪ್ಪಿ ನಾನು ನಡೆದಿದ್ದರೆ ನನ್ನ ಹೃದಯ, ಕಣ್ಗಳನ್ನು ಹಿಂಬಾಲಿಸಿದ್ದರೆ ಕಲ್ಮಷ ನನ್ನ ಕೈಗೆ ಅಂಟಿಕೊಂಡಿದ್ದರೆ,


ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.


ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಆಗ ನಾನೇ ಸ್ವತಃ ಮಾಡಿದ ಎಲ್ಲಾ ಕೆಲಸಕಾರ್ಯಗಳನ್ನೂ ಪಟ್ಟ ಎಲ್ಲ ಪ್ರಯಾಸವನ್ನೂ ಗಮನವಿಟ್ಟು ಪರಿಶೀಲಿಸಿದೆ. ಆದರೆ ಇಗೋ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಎಲ್ಲವೂ ವ್ಯರ್ಥ; ಲೋಕದಲ್ಲಿ ಲಾಭಕರವಾದುದು ಏನೂ ಕಾಣಲಿಲ್ಲ.


ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ!


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


ಜ್ಞಾನ ಎಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳನ್ನು ಅರಿತುಕೊಳ್ಳಲು ಮನಸ್ಸು ಮಾಡಿದೆ. ಆದರೆ ಇದೂ ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ವ್ಯರ್ಥ ಎಂದು ಅರಿತುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು