Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:1 - ಕನ್ನಡ ಸತ್ಯವೇದವು C.L. Bible (BSI)

1 ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಲೇಸು, ಜನನದ ದಿನಕ್ಕಿಂತ ಮರಣದ ದಿನ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸುಗಂಧತೈಲಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಜನನ ದಿನಕ್ಕಿಂತಲೂ ಮರಣ ದಿನವೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:1
23 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ಅತುಳ ಐಶ್ವರ್ಯಕ್ಕಿಂತ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತ ಪ್ರೀತಿ ವಿಶ್ವಾಸ ಅಮೂಲ್ಯ.


ಇದನ್ನು ನೋಡಿ ಜೀವದಿಂದ ಇರುವವರಿಗಿಂತ ಸತ್ತವರೇ ಧನ್ಯರೆಂದು ಹೊಗಳಿದೆ.


ಆದ್ದರಿಂದ ಈ ದೇಹವನ್ನು ತ್ಯಜಿಸಿ, ಪ್ರಭುವನ್ನೇ ನೆಚ್ಚಿ ನೆಲಸುವುದು ಲೇಸೆಂದು ಧೈರ್ಯದಿಂದ ಹೇಳುತ್ತೇವೆ.


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ನೀನು ಹಚ್ಚಿಕೊಂಡಿರುವ ತೈಲ ಎನಿತು ಸುವಾಸನೀಯ ಸುರಿದ ಪರಿಮಳದಂತೆ ವ್ಯಾಪ್ತ ನಿನ್ನ ನಾಮಾಂಕಿತ ಕನ್ಯೆಯರೆಲ್ಲರು ನಿನ್ನನು ಪ್ರೀತಿಸದಿರಲು ಅಸಾಧ್ಯ.


ಸತ್ತ ನೊಣಗಳಿಂದ ಗಂದಿಗನ ತೈಲ ಕೂಡ ನಾರುತ್ತದೆ. ಅಂತೆಯೇ ಹುಚ್ಚುತನ ಕೊಂಚವಾದರೂ ಜ್ಞಾನಮಾನಗಳನ್ನು ಕೆಡಿಸಿಬಿಡುತ್ತದೆ.


ತೈಲ, ಸುಗಂಧ ದ್ರವ್ಯಗಳು ಮನೋಹರ, ಮಿತ್ರನ ಆದರಣೆ, ಸಲಹೆ ಅತಿ ಮಧುರ.


ನನ್ನ ಆಲಯದಲ್ಲೆ, ಅದರ ಪ್ರಾಕಾರಗಳಲ್ಲೆ, ಅವರ ಸ್ಮಾರಕ ಶಿಲೆಗಳನ್ನು ಇಡುವೆನು. ಮಕ್ಕಳನ್ನು ಪಡೆದವರಿಗಿಂತಲು ಶ್ರೇಷ್ಠವಾದ ಹೆಸರನ್ನು ಅವರಿಗೆ ದಯಪಾಲಿಸುವೆನು. ಹೌದು, ಎಂದಿಗೂ ಅಳಿಯದ, ಶಾಶ್ವತವಾಗಿ ಉಳಿಯುವ, ಹೆಸರನ್ನು ಅವರಿಗೆ ದಯಪಾಲಿಸುವೆನು.


ಹಸನ್ಮುಖ ಕಂಡಾಗ ಹೃದಯಕ್ಕೆ ಆನಂದ; ಶುಭಸಮಾಚಾರದಿಂದ ದೇಹಕ್ಕೆ ಉತ್ತೇಜನ.


ದಣಿದವರಿಗೆ ದೊರಕುವುದು ಆ ಕೂಪದಲಿ ವಿಶ್ರಾಂತಿ ಅಣಗುವುದಲ್ಲಿ ದುರುಳರು ಕೊಡುವ ಹಾವಳಿ.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಅದು ರಮ್ಯ, ಸುರಿದ ಸುಗಂಧತೈಲ ಗಡ್ಡಕೆ ಇಳಿವಂತೆ I ಆರೋನನ ಗಡ್ಡದಿಂದ ಅವನ ಕೊರಳಪಟ್ಟಿಗೆ ಇಳಿವಂತೆ II


ಇವರೆಲ್ಲರೂ ವಿಶ್ವಾಸವುಳ್ಳವರಾದುದರಿಂದಲೇ ಸಜ್ಜನರೆಂದು ಹೆಸರುವಾಸಿಯಾದರು. ಆದರೂ ದೇವರು ವಾಗ್ದಾನಮಾಡಿದ ಸತ್ಫಲಗಳನ್ನು ಸವಿಯಲಿಲ್ಲ.


ನಮ್ಮ ಪೂರ್ವಜರು ದೈವಸಮ್ಮತಿಯನ್ನು ಪಡೆದದ್ದು ವಿಶ್ವಾಸದಿಂದಲೇ;


ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿ ಎಷ್ಟೋ ರಮ್ಯ ! ನಿನ್ನ ಪ್ರೇಮ ಮಧುಪಾನಕ್ಕಿಂತ ಎಷ್ಟೋ ಮಧುರ ! ನಿನ್ನ ತೈಲದ ಪರಿಮಳ ಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ !


ಆದಿಗಿಂತ ಅಂತ್ಯ ಲೇಸು; ಗರ್ವಕ್ಕಿಂತ ತಾಳ್ಮೆ ಲೇಸು.


“ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು.


ಅದರಂತೆ ಅವಳು ಅವನ ಪಾದಗಳ ಬಳಿಯಲ್ಲೇ ಮಲಗಿದಳು. ಅವಳು ಅಲ್ಲಿಗೆ ಬಂದದ್ದು ಯಾರಿಗೂ ತಿಳಿಯಬಾರದೆಂದು ಬೋವಜನು ಹೇಳಿದ್ದನು; ಎಂತಲೇ ನಸುಕಿನಲ್ಲೇ ಎದ್ದಳು.


ಬಯಲು ಮಾಡಿದರೆ ಕೇಳುವವನು ನಿನ್ನನ್ನೆ ಅವಮಾನಗೊಳಿಸಾನು, ನಿನಗೆ ಬರುವ ಅಪಕೀರ್ತಿ ಅಳಿಯದೆ ಉಳಿದೀತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು