Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:14 - ಕನ್ನಡ ಸತ್ಯವೇದವು C.L. Bible (BSI)

14 ಸುಖದಿನದಲ್ಲಿ ಸಂತೋಷದಿಂದಿರು, ದುಃಖದಿನದಲ್ಲಿ ಆಲೋಚಿಸಿನೋಡು; ಮನುಷ್ಯನು ತನ್ನ ಆಯುಸ್ಸು ಕಳೆದ ಮೇಲೆ ಸಂಭವಿಸುವುದೇನೆಂದು ಗ್ರಹಿಸಲಾಗದಂತೆ ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸುಖದ ದಿನದಲ್ಲಿ ಸುಖದಿಂದಿರು; ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವದನ್ನೂ ಗ್ರಹಿಸಲಾರದಂತೆ ದೇವರು ಇವುಗಳನ್ನು ದ್ವಂದ್ವ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ, ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೋ ಯಾರಿಗೂ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸುಖ ದಿನದಲ್ಲಿ ಸಂತೋಷವಾಗಿರು. ಆದರೆ ದುಃಖ ದಿನದಲ್ಲಿ ಇದನ್ನು ಯೋಚಿಸು: ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. ಹೀಗೆ ಮನುಷ್ಯನು ತನ್ನ ಆಯುಸ್ಸನ್ನು ಕಳೆದ ಮೇಲೆ ಭವಿಷ್ಯವನ್ನು ಗ್ರಹಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:14
35 ತಿಳಿವುಗಳ ಹೋಲಿಕೆ  

ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


“ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಹರ್ಷಾನಂದದಿಂದ ಸೇವೆಮಾಡದೆಹೋದಿರಿ.


ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:


ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.


ಕಷ್ಟಾನುಭವವೂ ಆಯಿತೆನಗೆ ಹಿತಕರ I ಅದು ತಂದಿತು ನಿನ್ನ ನಿಬಂಧನೆಗಳೆಚ್ಚರ II


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.


“ವ್ಯರ್ಥವೇ ವ್ಯರ್ಥ! ಸಮಸ್ತವೂ ವ್ಯರ್ಥ!!” ಎನ್ನುತ್ತಾನೆ ಉಪದೇಶಕ.


ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು,


ಒಬ್ಬ ತಂದೆ ತನ್ನ ಮಗನನ್ನು ಹೇಗೊ ಹಾಗೆಯೇ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಶಿಕ್ಷಿಸುತ್ತಾ ಬಂದರೆಂಬುದನ್ನು ನೀವು ಆಲೋಚಿಸಿ ನೋಡಬೇಕು.


ಸರ್ವೇಶ್ವರ ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲ ಸುಖ ಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯೆಯಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ಮುಂದೆ ಆಗುವುದೇನು ಎಂಬುದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಸಂಭವಿಸುವುದು ಎಂದು ಅವನಿಗೆ ತಿಳಿಸಬಲ್ಲವರು ಯಾರೂ ಇಲ್ಲ.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?


ಅವನ ಜೀವಮಾನವೆಲ್ಲ ಅಂಧಕಾರಮಯ, ಅದರಲ್ಲಿ ದುಃಖದುಗುಡ, ರೋಗರುಜಿನ, ಕೋಪತಾಪ ಇದ್ದೇ ಇರುತ್ತವೆ.


ಒಳಿತು-ಕೇಡು ಸಂಭವಿಸುವುದು ಪರಾತ್ಪರನ ಮಾತಿನಿಂದ ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು