Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:29 - ಕನ್ನಡ ಸತ್ಯವೇದವು C.L. Bible (BSI)

29 ಇದೊಂದು ನಿನಗೆ ತಿಳಿದಿರಲಿ: ದೇವರು ಮನುಷ್ಯರನ್ನು ಸಜ್ಜನರನ್ನಾಗಿ ಸೃಷ್ಟಿಸಿದರು; ಮನುಷ್ಯರಾದರೂ ಅನೇಕ ಸಮಸ್ಯೆಗಳನ್ನು ಕಲ್ಪಿಸಿಕೊಂಡಿದ್ದಾರೆ. ನನಗೆ ಕಂಡುಬಂದುದು ಇದುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೋಡು, ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದನು, ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ; ಇದನ್ನು ಮಾತ್ರ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನಾನು ಮತ್ತೊಂದು ವಿಷಯವನ್ನು ತಿಳಿದುಕೊಂಡೆನು. ಅದೇನೆಂದರೆ, ದೇವರು ಮನುಷ್ಯರನ್ನು ನೀತಿವಂತರನ್ನಾಗಿ ಸೃಷ್ಟಿಸಿದನು. ಆದರೆ ಜನರು ಕೆಟ್ಟವರಾಗಿರಲು ಅನೇಕ ದಾರಿಗಳನ್ನು ಕಂಡುಕೊಂಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ: ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದರು. ಮನುಷ್ಯರಾದರೋ ಅನೇಕ ಸ್ವಾರ್ಥ ಯೋಜನೆಗಳನ್ನು ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:29
20 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು.


ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II


ಅವರಕ್ರಮ ನಡತೆ ಪ್ರಭುವನು ಕೆಣಕಿತು I ಭೀಕರ ವ್ಯಾಧಿ ಅವರ ಮಧ್ಯೆ ಹಬ್ಬಿತು II


ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II


ಜ್ಞಾನಿಗೆ ಸಮಾನರು ಯಾರು? ಅವನಲ್ಲದೆ ಬಗೆಹರಿಸಬಲ್ಲವರು ಯಾರು? ಜ್ಞಾನವು ಮನುಷ್ಯನ ಮುಖವನ್ನು ವಿಕಾಸಗೊಳಿಸುತ್ತದೆ; ಗಂಟುಮೋರೆಯನ್ನು ಮಾರ್ಪಡಿಸುತ್ತದೆ.


ಹುಟ್ಟಿದ ದಿನದಿಂದ ಅಪರಾಧವೆಸಗುವವರೆಗೆ ನಿರ್ದೋಷವಾಗಿತ್ತು ನಿನ್ನ ನಡತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು