Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:3 - ಕನ್ನಡ ಸತ್ಯವೇದವು C.L. Bible (BSI)

3 ನಗೆಗಿಂತ ಅಳುವು ಲೇಸು; ಮುಖದಲ್ಲಿ ದುಃಖ, ಹೃದಯಕ್ಕೆ ಸುಖ..

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಗೆಗಿಂತ ದುಃಖವು ವಾಸಿ, ಮುಖವು ಸಪ್ಪಗಿರುವಲ್ಲಿ ಹೃದಯಕ್ಕೆ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಗೆಗಿಂತ ಕರಕರೆಯು ವಾಸಿ; ಮುಖವು ಸಪ್ಪೆಗಿರುವಲ್ಲಿ ಹೃದಯಕ್ಕೆ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಗುವಿಗಿಂತ ವ್ಯಸನವು ಇನ್ನೂ ಉತ್ತಮ. ಯಾಕೆಂದರೆ ನಮ್ಮ ಮುಖವು ವ್ಯಸನದಿಂದಿರುವಾಗ ನಮ್ಮ ಹೃದಯಕ್ಕೆ ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಗೆಗಿಂತ ದುಃಖವು ವಾಸಿ, ಏಕೆಂದರೆ ಮುಖದಲ್ಲಿ ದುಃಖ ಹೃದಯಕ್ಕೆ ಸುಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:3
21 ತಿಳಿವುಗಳ ಹೋಲಿಕೆ  

ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ.


ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ!


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಕಷ್ಟಾನುಭವವೂ ಆಯಿತೆನಗೆ ಹಿತಕರ I ಅದು ತಂದಿತು ನಿನ್ನ ನಿಬಂಧನೆಗಳೆಚ್ಚರ II


ಕಷ್ಟಾನುಭವಕೆ ಮುಂಚೆ ದಾರಿತಪ್ಪಿ ನಡೆದೆ I ಆದರೀಗ ನಡೆಯುತ್ತಿರುವೆ ನಿನ್ನ ನುಡಿಯಂತೆ II


“ನಗೆ ಹುಚ್ಚುತನ, ಸುಖಭೋಗ ನಿಷ್ಪ್ರಯೋಜಕ” ಎಂದುಕೊಂಡೆ.


ಜ್ಞಾನಿಯ ಹೃದಯ ಶೋಕದ ಆಲಯ; ಮೂಢನ ಹೃದಯ ಹಿಗ್ಗಿನ ನಿಲಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು