Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:8 - ಕನ್ನಡ ಸತ್ಯವೇದವು C.L. Bible (BSI)

8 ಆದಿಗಿಂತ ಅಂತ್ಯ ಲೇಸು; ಗರ್ವಕ್ಕಿಂತ ತಾಳ್ಮೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದಿಗಿಂತ ಅಂತ್ಯವು ಲೇಸು; ಹಮ್ಮುಗಾರನಿಗಿಂತ ತಾಳ್ಮೆಯುಳ್ಳವನು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆರಂಭಿಸುವ ಸಮಯಕ್ಕಿಂತಲೂ ಪೂರ್ಣಗೊಳಿಸುವ ಸಮಯವೇ ಮೇಲು. ಗರ್ವಕ್ಕಿಂತಲೂ ತಾಳ್ಮೆಯೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪ್ರಾರಂಭಕ್ಕಿಂತ ಅದರ ಅಂತ್ಯವೇ ಲೇಸು. ಗರ್ವಿಷ್ಠನಿಗಿಂತ ತಾಳ್ಮೆಯುಳ್ಳವನೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:8
20 ತಿಳಿವುಗಳ ಹೋಲಿಕೆ  

ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.


ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು.


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ಹಾಗೆಯೇ, ನೀವೂ ಸಹ ತಾಳ್ಮೆಯಿಂದಿರಿ, ದೃಢಚಿತ್ತರಾಗಿರಿ. ಪ್ರಭುವಿನ ಪುನರಾಗಮನ ಸನ್ನಿಹಿತವಾಗಿದೆ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.


ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.


ಉಗ್ರಕೋಪಿ ವ್ಯಾಜ್ಯವೆಬ್ಬಿಸುತ್ತಾನೆ; ದೀರ್ಘಶಾಂತನು ಜಗಳ ತೀರಿಸುತ್ತಾನೆ.


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.


ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.


ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.


ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಲೇಸು, ಜನನದ ದಿನಕ್ಕಿಂತ ಮರಣದ ದಿನ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು