Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:14 - ಕನ್ನಡ ಸತ್ಯವೇದವು C.L. Bible (BSI)

14 ಲೋಕದಲ್ಲಿ ನಡೆಯುವ ನಿರರ್ಥಕ ಕಾರ್ಯ ಒಂದುಂಟು; ದುರ್ಜನರ ನಡತೆಗೆ ಆಗಬೇಕಾದ ತಕ್ಕ ಶಿಕ್ಷೆ ಸಜ್ಜನರಿಗೆ ಆಗುತ್ತದೆ. ಸಜ್ಜನರಿಗೆ ಸಿಗಬೇಕಾದ ಸಂಭಾವನೆ ದುರ್ಜನರಿಗೆ ಸಿಗುತ್ತದೆ. ಇದು ನಿರರ್ಥಕವೆಂದೇ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವೊಂದುಂಟು; ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟರಿಗೆ ಆಗುವದು, ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವದು; ಇದೂ ವ್ಯರ್ಥವೆಂದು ನಾನು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಲೋಕದಲ್ಲಿ ಮತ್ತೊಂದು ಅನ್ಯಾಯವಿದೆ. ದುಷ್ಟರಿಗೆ ಕೇಡಾಗಬೇಕು, ಕೆಟ್ಟವುಗಳು ಕೆಟ್ಟ ಜನರಿಗೆ ಆಗಬೇಕು. ನೀತಿವಂತರಿಗೆ ಒಳ್ಳೆಯದಾಗಬೇಕು. ಆದರೆ ಕೆಲವು ಸಲ ನೀತಿವಂತರಿಗೆ ಕೇಡಾಗುತ್ತದೆ. ದುಷ್ಟರಿಗೆ ಒಳ್ಳೆಯದಾಗುತ್ತದೆ. ಅದು ನ್ಯಾಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಭೂಮಿಯ ಮೇಲೆ ನಡೆಯುವ ಇನ್ನೊಂದು ವ್ಯರ್ಥ ಕಾರ್ಯವಿದು: ದುಷ್ಟರಿಗೆ ಆಗಬೇಕಾದ ಶಿಕ್ಷೆಯನ್ನು ನೀತಿವಂತರು ಅನುಭವಿಸುತ್ತಾರೆ. ನೀತಿವಂತರಿಗೆ ಆಗಬೇಕಾದ ಪ್ರತಿಫಲವನ್ನು ದುಷ್ಟರು ಅನುಭವಿಸುತ್ತಾರೆ. ಇದು ಸಹ ವ್ಯರ್ಥವೆಂದು ನಾನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:14
16 ತಿಳಿವುಗಳ ಹೋಲಿಕೆ  

ಸಜ್ಜನನು ಸದ್ಧರ್ಮಿಯಾಗಿ ಜೀವಿಸುತ್ತಾ ಗತಿಸಿಹೋಗುತ್ತಾನೆ; ದುರ್ಜನನಾದರೋ ಅಧರ್ಮದಲ್ಲಿ ಬಹುಕಾಲ ಬದುಕುತ್ತಾನೆ. ಇದನ್ನು ಎಲ್ಲಾ ನನ್ನ ನಿರರ್ಥಕ ಜೀವನದಲ್ಲಿ ಎಷ್ಟೋ ನೋಡಿದ್ದೇನೆ.


ಅಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೇ ಅಲ್ಲ, ದೇವರನ್ನೇ ಪರೀಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ,” ಎಂದು ನೀವು ಹೇಳಿದ್ದೀರಿ.


“ಜ್ಞಾನಿಗೆ ಹಣೆಯಲ್ಲಿ ಕಣ್ಣು, ಮೂಢನೋ ಕತ್ತಲೆಯಲ್ಲಿ ನಡೆಯುತ್ತಾನೆ". ಆದರೆ ಇವರಿಬ್ಬರ ಗತಿ ಒಂದೇ ಎಂದು ಕಂಡುಬಂದಿತು.


ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II


ದುರುಳರು ಮುದುಕರಾಗುವವರೆಗೂ ಬದುಕುವುದೇಕೆ? ಅಂಥವರು ಪ್ರಬಲರು, ಬಲಿಷ್ಠರು ಆಗುವುದೇಕೆ?


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ಕಂಡೆ. ಅದು ಅಧಿಪತಿಗಳ ತಪ್ಪಿನಿಂದಾದುದು.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಈ ಎಲ್ಲ ವಿಪತ್ತು ಬಂದೊದಗಿದರೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲಿಲ್ಲ.


ಇಗೋ, ನೀವೆಲ್ಲರೂ ಇದನು ನೋಡಿದ್ದೀರಿ ಖುದ್ದಾಗಿ ಮತ್ತೆ ಏಕೆ ವಾದಿಸುತ್ತೀರಿ ವ್ಯರ್ಥವಾಗಿ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು