Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:15 - ಕನ್ನಡ ಸತ್ಯವೇದವು C.L. Bible (BSI)

15 ಆದುದರಿಂದಲೇ ಸಂತೋಷವನ್ನು ಶ್ಲಾಘಿಸುತ್ತೇನೆ. ಮನುಷ್ಯನು ಅನ್ನಪಾನಗಳನ್ನು ಸೇವಿಸಿ ಸಂತೋಷಪಡುವುದಕ್ಕಿಂತ ಮೇಲಾದುದು ಅವನಿಗೆ ಈ ಲೋಕದಲ್ಲಿ ಇನ್ನಾವುದೂ ಇಲ್ಲ. ದೇವರು ಅವನಿಗೆ ಇಹದಲ್ಲಿ ಅನುಗ್ರಹಿಸುವ ಜೀವಾವಧಿಯಲ್ಲಿ ಅವನು ಪಡುವ ಪ್ರಯಾಸಕ್ಕೆ ಸುಖಾನುಭವ ಸೇರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ಮನುಷ್ಯನು ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವದಕ್ಕಿಂತ ಅವನಿಗೆ ಲೋಕದಲ್ಲಿ ಇನ್ನಾವ ಮೇಲೂ ಇಲ್ಲವೆಂದು ಸಂತೋಷವನ್ನೇ ಸ್ತುತಿಸಿದೆನು; ದೇವರು ಅವನಿಗೆ ಲೋಕದಲ್ಲಿ ಅನುಗ್ರಹಿಸುವ ದಿನಗಳಲ್ಲೆಲ್ಲಾ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಜೀವನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವುದೇ ಉತ್ತಮವೆಂದು ನಿರ್ಧರಿಸಿದೆನು. ಯಾಕೆಂದರೆ ದೇವರು ಮನುಷ್ಯನಿಗೆ ಈ ಲೋಕದಲ್ಲಿ ಅನುಗ್ರಹಿಸಿರುವ ಪ್ರಯಾಸಕರ ಕೆಲಸಗಳಲ್ಲಿಯೂ ಮನುಷ್ಯನು ಸಂತೋಷವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದುದರಿಂದ ನಾನು ಸಂತೋಷವನ್ನು ಮೆಚ್ಚಿದೆನು. ಏಕೆಂದರೆ ಮನುಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವುದೂ ತಿನ್ನುವುದೂ ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದಿಲ್ಲ. ಸೂರ್ಯನ ಕೆಳಗೆ ದೇವರು ಮನುಷ್ಯನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟಕ್ಕೆ ಸುಖಾನುಭವವು ಅವನಿಗೆ ಸೇರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:15
11 ತಿಳಿವುಗಳ ಹೋಲಿಕೆ  

ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.


ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


“ಬಾ ಮನವೇ, ಸಂತೋಷದ ಮೂಲಕ ನಿನ್ನನ್ನು ಪರೀಕ್ಷಿಸುವೆ; ಸುಖಭೋಗವನ್ನು ಅನುಭವಿಸು” ಎಂದು ಮನಸ್ಸಿನಲ್ಲೇ ಹೇಳಿಕೊಂಡೆ. ಆದರೆ ಇದೂ ವ್ಯರ್ಥವೇ ಸರಿ.


ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.


ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ಒಪ್ಪಿಸಿದೆ. ಹೃದಯ ಕೋರಿದ ಸಂತೋಷವನ್ನು ಅದಕ್ಕೆ ನಿರಾಕರಿಸಲಿಲ್ಲ. ನನ್ನ ಮನ ಎಲ್ಲಾ ಕಾರ್ಯಕಲಾಪಗಳಲ್ಲೂ ಉಲ್ಲಾಸಗೊಳ್ಳುತ್ತಿತ್ತು. ಇವೆಲ್ಲ ನನ್ನ ಪ್ರಯಾಸಕ್ಕೆ ದೊರೆತ ಫಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು