Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:16 - ಕನ್ನಡ ಸತ್ಯವೇದವು C.L. Bible (BSI)

16 ನಾನು ಜ್ಞಾನವನ್ನು ಪಡೆಯಲು, ಜಗದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ ಇದು ನನಗೆ ಮನದಟ್ಟಾಯಿತು: ಒಬ್ಬನು ರಾತ್ರಿ ಹಗಲು, ಕಣ್ಣುಗಳಿಗೆ ನಿದ್ರೆ ಹಚ್ಚಗೊಡದೆ ಪರಿಶೀಲಿಸಿದರೂ ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಲು ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ರಾತ್ರಿ ಹಗಲು ಮನುಷ್ಯರ ಕಣ್ಣುಗಳಿಗೆ ನಿದ್ರೆ ಹತ್ತಗೊಡದ ಲೋಕದ ಶ್ರಮೆಯನ್ನು ನೋಡಲೂ ಜ್ಞಾನವನ್ನು ಪಡೆಯಲೂ ನಾನು ಮನಸ್ಸಿಟ್ಟಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ಲೋಕದಲ್ಲಿ ಜನರ ಕಾರ್ಯಗಳನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದೆ. ಅವರು ಹಗಲುರಾತ್ರಿ ಕೆಲಸ ಮಾಡುವರು; ಕೆಲವೊಮ್ಮೆ ನಿದ್ರೆಯನ್ನೂ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಜ್ಞಾನವನ್ನು ತಿಳಿದುಕೊಳ್ಳುವುದಕ್ಕೂ ಭೂಮಿಯ ಮೇಲೆ ಮಾಡುವ ಪರಿಶ್ರಮವನ್ನು ನೋಡುವುದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು. ಜನರು ರಾತ್ರಿ ಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ಹಚ್ಚಗೊಡದವರೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:16
11 ತಿಳಿವುಗಳ ಹೋಲಿಕೆ  

ಅವನ ಮನಸ್ಸಿಗೆ ನೆಮ್ಮದಿ ಇಲ್ಲ, ಇದು ಸಹ ವ್ಯರ್ಥವೇ ಸರಿ.


ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.


ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II


ಈ ಲೋಕದಲ್ಲಿ ನಡೆಯುವ ಆಗುಹೋಗುಗಳನ್ನೆಲ್ಲ ಚಿಂತಿಸಿ ನೋಡಿದಾಗ ಈ ವಿಷಯಗಳು ಕಂಡುಬಂದವು: ಈಗ ಒಬ್ಬನು ಮತ್ತೊಬ್ಬನ ಮೇಲೆ ದಬ್ಬಾಳಿಕೆ ನಡೆಸುತ್ತಾನೆ; ಹಾನಿಯನ್ನು ಉಂಟುಮಾಡುತ್ತಾನೆ.


ಮುಂದೆ ಆಗುವುದೇನು ಎಂಬುದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಸಂಭವಿಸುವುದು ಎಂದು ಅವನಿಗೆ ತಿಳಿಸಬಲ್ಲವರು ಯಾರೂ ಇಲ್ಲ.


ನಾನು ಮತ್ತೆ ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ, ವಿಚಾರಿಸಿ, ಗ್ರಹಿಸಿಕೊಳ್ಳಲು ಆಶಿಸಿದೆ; ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳಲು ಮನಸ್ಸುಮಾಡಿದೆ.


ದುಡಿಯುವವನು ಸ್ವಲ್ಪ ತಿಂದರೂ ಸರಿ, ಹೆಚ್ಚು ತಿಂದರೂ ಸರಿ, ಹಾಯಾಗಿ ನಿದ್ರಿಸುತ್ತಾನೆ. ಐಶ್ವರ್ಯವಂತನ ಸಂಪತ್ತಾದರೋ ಅವನಿಗೆ ನಿದ್ರೆ ಬರಲು ಬಿಡುವುದಿಲ್ಲ.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಹಗಲಿನ ಬೇಗೆಯಿಂದಲೂ ಇರುಳಿನ ಚಳಿಯಿಂದಲೂ ಕರಗಿಹೋಗಿದ್ದೆ; ಕಣ್ಣುಗಳಿಗೆ ನಿದ್ರೆ ದೂರವಾಗಿತ್ತು.


ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ.


ಜ್ಞಾನ ಎಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳನ್ನು ಅರಿತುಕೊಳ್ಳಲು ಮನಸ್ಸು ಮಾಡಿದೆ. ಆದರೆ ಇದೂ ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ವ್ಯರ್ಥ ಎಂದು ಅರಿತುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು