Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:17 - ಕನ್ನಡ ಸತ್ಯವೇದವು C.L. Bible (BSI)

17 ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಅವನಿಂದ ಸಾಧ್ಯವಾಗದು. ಹೌದು, ಜ್ಞಾನಿ ತನ್ನಿಂದಾಗುತ್ತದೆ ಎಂದು ಹೇಳಿಕೊಳ್ಳಬಹುದು; ಆದರೆ ಅವನಿಂದಲೂ ಅದು ಸಾಧ್ಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಲೋಕದಲ್ಲಿ ನಡೆಯುವದನ್ನು ಮನುಷ್ಯನು ಗ್ರಹಿಸಲಾರನು, ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಗ್ರಹಿಸಲಾರನು; ಹೌದು, ಜ್ಞಾನಿಯು ಗ್ರಹಿಸಬಹುದೆಂದರೂ ಗ್ರಹಿಸಲಾರನು ಎಂಬದಾಗಿ ನಾನು ದೇವರ ಕೆಲಸವನ್ನೆಲ್ಲಾ ದೃಷ್ಟಿಸಿ ತಿಳಿದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇದಲ್ಲದೆ ದೇವರ ಅನೇಕ ಕಾರ್ಯಗಳನ್ನು ಸಹ ನಾನು ನೋಡಿದ್ದೇನೆ. ಭೂಮಿಯ ಮೇಲೆ ದೇವರು ಮಾಡುವ ಕಾರ್ಯಗಳನ್ನೆಲ್ಲಾ ಜನರು ಅರ್ಥಮಾಡಿಕೊಳ್ಳಲಾರರು. ಒಬ್ಬನು ಅರ್ಥಮಾಡಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಅವನು ಅರ್ಥಮಾಡಿಕೊಳ್ಳಲಾರನು. ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಬಲ್ಲೆನೆಂದು ಜ್ಞಾನಿಯು ಹೇಳಿಕೊಂಡರೂ ಅದು ಸತ್ಯವಲ್ಲ. ಅವುಗಳನ್ನೆಲ್ಲ ಯಾರೂ ಅರ್ಥಮಾಡಿಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ತರುವಾಯ ದೇವರ ಮಾಡುವ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು. ಅದೇನೆಂದರೆ, ಸೂರ್ಯನ ಕೆಳಗೆ ಮಾಡುವ ದೇವರ ಕೆಲಸಗಳನ್ನು ಮನುಷ್ಯನು ಗ್ರಹಿಸಲಾರನು. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಸಹ ದೇವರು ಮಾಡುವುದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:17
13 ತಿಳಿವುಗಳ ಹೋಲಿಕೆ  

ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಇದರ ಮರ್ಮವನು ನಾ ಬಗೆಹರಿಸಲು ಯತ್ನಿಸೆ I ತೋಚಿತೆನಗಿದು ಬಿಡಿಸಲಾಗದಂಥ ಸಮಸ್ಯೆ II


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನಿನ್ನಿಂದ ತಿಳಿಯಲಾಗದು. ಅಂತೆಯೇ ಸರ್ವೇಶ್ವರನಾದ ದೇವರ ಕಾರ್ಯವನ್ನು ನಿನ್ನಿಂದ ಗ್ರಹಿಸಲಾಗದು.


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.


ದೇವರ ಸೃಷ್ಟಿಕಾರ್ಯವನ್ನು ಗಮನಿಸು; ಅವರು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು