Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:6 - ಕನ್ನಡ ಸತ್ಯವೇದವು C.L. Bible (BSI)

6 ಪ್ರತಿಯೊಂದು ಕಾರ್ಯಕ್ಕೆ ಒಂದು ಕಾಲ, ಒಂದು ಕ್ರಮ ಇರುತ್ತದೆಯಲ್ಲವೆ? ಮನುಷ್ಯನು ಎದುರಿಸಬೇಕಾದ ಕಷ್ಟಕಾರ್ಪಣ್ಯಗಳು ಘನತರವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪ್ರತಿಯೊಂದು ಕಾರ್ಯಕ್ಕೆ ಕಾಲವೂ ನ್ಯಾಯತೀರ್ಪೂ ಇರುವವಲ್ಲವೆ; ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವೂ ಸೂಕ್ತ ಮಾರ್ಗವೂ ಮನುಷ್ಯನಿಗೆ ಇವೆ. ಮನುಷ್ಯನು ತನ್ನ ಅನೇಕ ತೊಂದರೆಗಳಲ್ಲಿಯೂ ಅವುಗಳಿಗೆ ತಕ್ಕಂತೆ ನಿರ್ಧಾರವನ್ನು ಕೈಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮನುಷ್ಯನಿಗೆ ಕಷ್ಟಸಂಕಟವು ಭಾರವಾಗಿದ್ದರೂ ಪ್ರತಿಯೊಂದು ಕಾರ್ಯಕ್ಕೂ ಸರಿಯಾದ ಕಾಲ ಮತ್ತು ಕ್ರಮ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:6
14 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ:


ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.


ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.


ಆದರೂ ನನಗೆ ಚೆನ್ನಾಗಿ ಗೊತ್ತಿತ್ತು; ನಿನ್ನ ಹೃದಯದಲ್ಲಿ ಗುಟ್ಟಾದ ಯೋಜನೆಯೊಂದು ಹುದುಗಿತ್ತು;


ಹೀಗೆ ದುಷ್ಕಾರ್ಯದಿಂದ ಮನುಷ್ಯನನ್ನು ತಪ್ಪಿಸುತ್ತಾನೆ ಅವನ ಅಹಂಕಾರ ಗರ್ವವನು ಅಡಗಿಸುತ್ತಾನೆ.


ಇದಲ್ಲದೆ, ಮಾನವ ವ್ಯಾಧಿಯಿಂದ ಹಾಸಿಗೆ ಹಿಡಿದಿರುವಾಗ ಅವನನ್ನು ತಿದ್ದುತ್ತಾನೆ ಅವನ ದೇಹ ನರಳುತ್ತಿರುವಾಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು