Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:7 - ಕನ್ನಡ ಸತ್ಯವೇದವು C.L. Bible (BSI)

7 ಮುಂದೆ ಆಗುವುದೇನು ಎಂಬುದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಸಂಭವಿಸುವುದು ಎಂದು ಅವನಿಗೆ ತಿಳಿಸಬಲ್ಲವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಏಕಂದರೆ ಮುಂದೆ ಆಗುವದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಆಗುವದೋ ಅವನಿಗೆ ವಿವರಿಸಬಲ್ಲವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಕೆಂದರೆ ಮುಂದೆ ಏನಾಗುವುದೋ ಅವನಿಗೆ ತಿಳಿಯದು. ಮುಂದೆ ಅದು ಹೇಗೆ ಆಗುವುದೋ ಎಂದು ಅವನಿಗೆ ತಿಳಿಸುವವರು ಯಾರು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಮುಂದೆ ಆಗುವುದೇನೆಂದು ಯಾರಿಗೂ ತಿಳಿಯದು. ಮುಂದೆ ಏನಾಗುವುದೆಂದು ಮನುಷ್ಯನಿಗೆ ತಿಳಿಸುವವರು ಯಾರು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:7
14 ತಿಳಿವುಗಳ ಹೋಲಿಕೆ  

ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?


ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು.


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸೀತು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?


ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮಾನವನ ಜೀವಮಾನ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಹಿತವೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಳ್ಳಲು ಸಾಧ್ಯ?


ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಸುಖದಿನದಲ್ಲಿ ಸಂತೋಷದಿಂದಿರು, ದುಃಖದಿನದಲ್ಲಿ ಆಲೋಚಿಸಿನೋಡು; ಮನುಷ್ಯನು ತನ್ನ ಆಯುಸ್ಸು ಕಳೆದ ಮೇಲೆ ಸಂಭವಿಸುವುದೇನೆಂದು ಗ್ರಹಿಸಲಾಗದಂತೆ ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ.


ಇದಲ್ಲದೆ, ಎಸ್ತೇರ್‍ರಾಣಿಯೇ ಸ್ವತಃ ಏರ್ಪಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ತನ್ನನ್ನಲ್ಲದೆ ಬೇರಾರನ್ನು ಕರೆದಿಲ್ಲವೆಂತಲೂ ಮರುದಿನವೂ ಅರಸನೊಟ್ಟಿಗೆ ಔತಣ ಮಾಡಲು ತನ್ನನ್ನು ಆಹ್ವಾನಿಸಿರುವಳೆಂದೂ ತಿಳಿಸಿದನು.


ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ.


ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು