Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:1 - ಕನ್ನಡ ಸತ್ಯವೇದವು C.L. Bible (BSI)

1 ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಏಕೆಂದರೆ ಧರ್ಮಿಗಳೂ ಜ್ಞಾನಿಗಳೂ ಅವರ ಕೃತ್ಯಗಳೂ ದೇವರ ಕೈಯಲ್ಲುಂಟು; ತಾವು ಪ್ರೀತಿಗೆ ಗುರಿಯೋ ದ್ವೇಷಕ್ಕೆ ಗುರಿಯೋ ಮನುಷ್ಯರಿಗೆ ಗೊತ್ತಿಲ್ಲ. ಅವರ ಮುಂದೆ ಸಮಸ್ತವೂ ಕಾದಿದೆ ಎಂಬೀ ವಿಷಯಗಳನ್ನೆಲ್ಲಾ ವಿಚಾರಿಸಬೇಕೆಂದು ಮನಸ್ಸಿಗೆ ತೆಗೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಇವೆಲ್ಲವುಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಆಲೋಚಿಸಿದೆ. ಒಳ್ಳೆಯವರಿಗೂ ಜ್ಞಾನಿಗಳಿಗೂ ಅವರ ಕಾರ್ಯಗಳಿಗೂ ಸಂಭವಿಸುವುದೆಲ್ಲಾ ದೇವರ ಹತೋಟಿಯಲ್ಲಿದೆ. ತಾವು ಪ್ರೀತಿಗೆ ಗುರಿಯಾಗುವರೋ ದ್ವೇಷಕ್ಕೆ ಗುರಿಯಾಗುವರೋ ಅವರಿಗೆ ಗೊತ್ತಿಲ್ಲ. ಮುಂದೆ ಸಂಭವಿಸುವುದೂ ಅವರಿಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಇವೆಲ್ಲವುಗಳ ಮೇಲೆ ಅಭ್ಯಾಸ ಮಾಡಿ ಈ ತೀರ್ಮಾನಕ್ಕೆ ಬಂದೆನು. ಅದೇನೆಂದರೆ, ನೀತಿವಂತರ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಆದರೆ ಅವರಿಗೆ ಪ್ರೀತಿ ಕಾದಿದೆಯೋ ಅಥವಾ ದ್ವೇಷ ಕಾದಿದೆಯೋ ಎಂದು ಯಾರಿಗೂ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:1
31 ತಿಳಿವುಗಳ ಹೋಲಿಕೆ  

ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಲೋಕದಲ್ಲಿ ನಡೆಯುವ ನಿರರ್ಥಕ ಕಾರ್ಯ ಒಂದುಂಟು; ದುರ್ಜನರ ನಡತೆಗೆ ಆಗಬೇಕಾದ ತಕ್ಕ ಶಿಕ್ಷೆ ಸಜ್ಜನರಿಗೆ ಆಗುತ್ತದೆ. ಸಜ್ಜನರಿಗೆ ಸಿಗಬೇಕಾದ ಸಂಭಾವನೆ ದುರ್ಜನರಿಗೆ ಸಿಗುತ್ತದೆ. ಇದು ನಿರರ್ಥಕವೆಂದೇ ಹೇಳುತ್ತೇನೆ.


ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.


ನಿನ್ನ ಕಾರ್ಯಭಾರವನ್ನು ಸರ್ವೇಶ್ವರನಿಗೆ ವಹಿಸು; ಆಗ ಸಫಲವಾಗುವುದು ನಿನ್ನ ಯೋಜನೆಯು.


ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?


ನಾನು ಜ್ಞಾನವನ್ನು ಪಡೆಯಲು, ಜಗದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ ಇದು ನನಗೆ ಮನದಟ್ಟಾಯಿತು: ಒಬ್ಬನು ರಾತ್ರಿ ಹಗಲು, ಕಣ್ಣುಗಳಿಗೆ ನಿದ್ರೆ ಹಚ್ಚಗೊಡದೆ ಪರಿಶೀಲಿಸಿದರೂ ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಲು ಆಗದು.


ನಾನು ಮತ್ತೆ ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ, ವಿಚಾರಿಸಿ, ಗ್ರಹಿಸಿಕೊಳ್ಳಲು ಆಶಿಸಿದೆ; ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳಲು ಮನಸ್ಸುಮಾಡಿದೆ.


ಸಜ್ಜನನು ಸದ್ಧರ್ಮಿಯಾಗಿ ಜೀವಿಸುತ್ತಾ ಗತಿಸಿಹೋಗುತ್ತಾನೆ; ದುರ್ಜನನಾದರೋ ಅಧರ್ಮದಲ್ಲಿ ಬಹುಕಾಲ ಬದುಕುತ್ತಾನೆ. ಇದನ್ನು ಎಲ್ಲಾ ನನ್ನ ನಿರರ್ಥಕ ಜೀವನದಲ್ಲಿ ಎಷ್ಟೋ ನೋಡಿದ್ದೇನೆ.


ಜ್ಞಾನ ಎಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳನ್ನು ಅರಿತುಕೊಳ್ಳಲು ಮನಸ್ಸು ಮಾಡಿದೆ. ಆದರೆ ಇದೂ ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ವ್ಯರ್ಥ ಎಂದು ಅರಿತುಕೊಂಡೆ.


ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ನಾನು ನೀನಾಗಿದ್ದರೆ ದೇವರಿಗೆ ಮೊರೆಯಿಡುತ್ತಿದ್ದೆ ನನ್ನ ವಿಷಯವನು ಆತನ ಕೈಗೆ ಬಿಡುತ್ತಿದ್ದೆ.


ಕೈಯಲಿ ಜೀವ ಹಿಡಿದು ಕಳೆಯುತಿರುವೆ ಕಾಲವೆಲ್ಲ I ಆದರೂ ಪ್ರಭು, ನಾ ಧರ್ಮಶಾಸ್ತ್ರವನು ಮರೆತಿಲ್ಲ II


ಅವರ ಪ್ರೀತಿ, ದ್ವೇಷ, ಮತ್ಸರ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಇಹಲೋಕದಲ್ಲಿ ನಡೆಯುವ ಯಾವುದರಲ್ಲೂ ಅವರಿಗೆ ಇನ್ನೆಂದಿಗೂ ಪಾಲಿರುವುದಿಲ್ಲ.


ನೇರೀಯನ ಮಗ ಬಾರೂಕನನ್ನು, ರಾಜಕುವರಿಯರನ್ನು, ಅಂತು ಗಂಡಸರು, ಹೆಂಗಸರು, ಮಕ್ಕಳು,


ಇಗೋ, ನೀವೆಲ್ಲರೂ ಇದನು ನೋಡಿದ್ದೀರಿ ಖುದ್ದಾಗಿ ಮತ್ತೆ ಏಕೆ ವಾದಿಸುತ್ತೀರಿ ವ್ಯರ್ಥವಾಗಿ?”


ಮುಂದೆ ಆಗುವುದೇನು ಎಂಬುದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಸಂಭವಿಸುವುದು ಎಂದು ಅವನಿಗೆ ತಿಳಿಸಬಲ್ಲವರು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು