Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:13 - ಕನ್ನಡ ಸತ್ಯವೇದವು C.L. Bible (BSI)

13 ಲೋಕದಲ್ಲಿ ನಾನು ಜ್ಞಾನವನ್ನು ಈ ವಿಧವಾಗಿ ಮನಗಂಡೆ; ಅದು ನನ್ನ ದೃಷ್ಟಿಗೆ ದೊಡ್ಡದಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು. ಅದು ದೊಡ್ಡದೆಂದು ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು; ಅದು ದೊಡ್ಡದೆಂದು ತೋಚಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇದಲ್ಲದೆ ಲೋಕದಲ್ಲಿ ಜ್ಞಾನದ ಕಾರ್ಯವನ್ನು ಮಾಡುವ ಒಬ್ಬನನ್ನು ನಾನು ಕಂಡೆನು. ಅದು ತುಂಬ ಮುಖ್ಯವಾದದ್ದೆಂದು ನನಗೆ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೂರ್ಯನ ಕೆಳಗೆ ನಾನು ಜ್ಞಾನವನ್ನು ಈ ವಿಧವಾಗಿ ನೋಡಿದ್ದೇನೆ. ಇದು ನನ್ನ ದೃಷ್ಟಿಗೆ ದೊಡ್ಡದಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:13
9 ತಿಳಿವುಗಳ ಹೋಲಿಕೆ  

ನಾನು ಜ್ಞಾನವನ್ನು ಪಡೆಯಲು, ಜಗದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ ಇದು ನನಗೆ ಮನದಟ್ಟಾಯಿತು: ಒಬ್ಬನು ರಾತ್ರಿ ಹಗಲು, ಕಣ್ಣುಗಳಿಗೆ ನಿದ್ರೆ ಹಚ್ಚಗೊಡದೆ ಪರಿಶೀಲಿಸಿದರೂ ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಲು ಆಗದು.


ಸಜ್ಜನನು ಸದ್ಧರ್ಮಿಯಾಗಿ ಜೀವಿಸುತ್ತಾ ಗತಿಸಿಹೋಗುತ್ತಾನೆ; ದುರ್ಜನನಾದರೋ ಅಧರ್ಮದಲ್ಲಿ ಬಹುಕಾಲ ಬದುಕುತ್ತಾನೆ. ಇದನ್ನು ಎಲ್ಲಾ ನನ್ನ ನಿರರ್ಥಕ ಜೀವನದಲ್ಲಿ ಎಷ್ಟೋ ನೋಡಿದ್ದೇನೆ.


ಧರೆಯಲ್ಲಿ ಮಾನವರಿಗೆ ಬಂದೊದಗುವ ದೊಡ್ಡ ದುರವಸ್ಥೆ ಒಂದನ್ನು ಕಂಡೆ.


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ಅವರು ಬಿಕ್ರೀಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಅವನ ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಜೆರುಸಲೇಮಿನಲ್ಲಿದ್ದ ಅರಸನ ಬಳಿಗೆ ಬಂದನು.


ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಕೆಲವೇ ನಿವಾಸಿಗಳು. ಬಲಿಷ್ಠವಾದ ಅರಸ ಅದಕ್ಕೆ ಮುತ್ತಿಗೆಹಾಕಿದ. ಅದರ ಸುತ್ತಲು ದೊಡ್ಡ ಕೋಟೆ ಎಬ್ಬಿಸಿದ.


ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬಿಲೋನಿನ ವಿದ್ವಾಂಸರ ಸಂಹಾರಕ್ಕಾಗಿ ಹೊರಟಾಗ ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು