Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ಅಲ್ಲಿದ್ದವರು ತಮ್ಮಲ್ಲೇ ಒಬ್ಬ. ಜ್ಞಾನಿಯನ್ನು ಕಂಡುಹಿಡಿದರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದ. ಆದರೆ ಆ ಬಡಜ್ಞಾನಿಯನ್ನು ಆಮೇಲೆ ಯಾರೂ ಸ್ಮರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು; ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ನಗರದಲ್ಲಿ ಒಬ್ಬ ಜ್ಞಾನಿ ಇದ್ದನು. ಆದರೆ ಅವನು ಬಡವನಾಗಿದ್ದನು, ಅವನು ತನ್ನ ಜ್ಞಾನದಿಂದ ಆ ನಗರವನ್ನು ಕಾಪಾಡಿದನು; ಆದರೆ ಜನರು ಅವನನ್ನು ಮರೆತೇಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅದರಲ್ಲಿ ಒಬ್ಬ ಜ್ಞಾನಿಯಾದ ಬಡ ಮನುಷ್ಯನು ಬಂದು, ತನ್ನ ಜ್ಞಾನದಿಂದ ಆ ಪಟ್ಟಣವನ್ನು ರಕ್ಷಿಸಿದನು. ಆದರೂ ಆ ಬಡ ಮನುಷ್ಯನನ್ನು ಯಾರೂ ಜ್ಞಾಪಕ ಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:15
8 ತಿಳಿವುಗಳ ಹೋಲಿಕೆ  

ಬುದ್ಧಿಮಾತಿಗೆ ಕಿವಿಗೊಡದ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.


ಆದರೆ ಮುಖ್ಯ ಪಾನಸೇವಕನು ಜೋಸೆಫನನ್ನು ನೆನಪಿಗೆ ತಂದುಕೊಳ್ಳಲಿಲ್ಲ, ಅವನನ್ನು ಮರೆತೇಬಿಟ್ಟ.


ಅವರು ಬಿಕ್ರೀಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಅವನ ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಜೆರುಸಲೇಮಿನಲ್ಲಿದ್ದ ಅರಸನ ಬಳಿಗೆ ಬಂದನು.


ಏಕೆಂದರೆ ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ನಿರಂತರವಾಗಿ ಮರೆತುಹೋಗುವರು. ಮುಂದಿನ ಕಾಲದವರು ಈಗಿನವರನ್ನೆಲ್ಲ ಮರೆತುಬಿಡುವರು ಎಂಬುದು ನಿಶ್ಚಯ. ನಿಸ್ಸಂದೇಹವಾಗಿ ಮೂಢನಂತೆ ಜ್ಞಾನಿಯು ಮೃತನಾಗುವನು.


ಜ್ಞಾನಿ ಹಿಡಿಯಬಲ್ಲನು ಬಲಿಷ್ಠರ ಪಟ್ಟಣವನ್ನು ಕೆಡವಬಲ್ಲನು ಅವರ ಬಲವಾದ ಕೋಟೆಯನ್ನು.


ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನು ನೋಡಿದ್ದೇನೆ. ಸಜ್ಜನರು ಆ ಪವಿತ್ರ ಸ್ಥಾನದಿಂದ ಹೊರಟುಬಂದು ಆ ದುರ್ಜನರ ನಡತೆಯನ್ನು ಅವರಿದ್ದ ಪಟ್ಟಣದಲ್ಲೇ ಹೊಗಳುತ್ತಾರೆ! ಇದು ನಿರರ್ಥಕ.


ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು