Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:16 - ಕನ್ನಡ ಸತ್ಯವೇದವು C.L. Bible (BSI)

16 ಇದನ್ನು ನೋಡಿದ ನಾನು, ಶಕ್ತಿಗಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಆ ಬಡವನ ಜ್ಞಾನವನ್ನು ತಾತ್ಸಾರ ಮಾಡುತ್ತಾರೆ, ಅವನ ಮಾತುಗಳನ್ನು ಗಮನಿಸುವುದಿಲ್ಲ, ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಇದನ್ನು ನೋಡಿ, ಬಲಕ್ಕಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರಮಾಡಿ ಅವನ ಮಾತುಗಳನ್ನು ಗಮನಿಸರು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಹೇಳುವುದೇನೆಂದರೆ, ಜ್ಞಾನವು ಶಕ್ತಿಗಿಂತಲೂ ಉತ್ತಮ. ಅವರು ಆ ಬಡವನ ಜ್ಞಾನವನ್ನು ಮರೆತುಬಿಟ್ಟರೂ ಅವನ ಮಾತುಗಳನ್ನು ಕೇಳದಿದ್ದರೂ ಜ್ಞಾನವು ಉತ್ತಮವಾದದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದನ್ನು ನೋಡಿ ನಾನು, “ಬಲಕ್ಕಿಂತ ಜ್ಞಾನವು ಉತ್ತಮ; ಆದರೆ ಜನರು ಬಡವನ ಜ್ಞಾನವನ್ನು ತಿರಸ್ಕಾರ ಮಾಡುತ್ತಾರೆ, ಅವನ ಮಾತುಗಳನ್ನು ಯಾರೂ ಲಕ್ಷಿಸುವುದಿಲ್ಲ,” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:16
13 ತಿಳಿವುಗಳ ಹೋಲಿಕೆ  

ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.


ಬಲವಂತನಿಗಿಂತ ಬುದ್ಧಿವಂತ ಶಕ್ತಿಶಾಲಿ; ಶೂರನಿಗಿಂತ ಜ್ಞಾನಿಯೇ ಬಲಶಾಲಿ.


ಜ್ಞಾನಿ ಹಿಡಿಯಬಲ್ಲನು ಬಲಿಷ್ಠರ ಪಟ್ಟಣವನ್ನು ಕೆಡವಬಲ್ಲನು ಅವರ ಬಲವಾದ ಕೋಟೆಯನ್ನು.


ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಆದರೆ ಒಬ್ಬನೇ ಒಬ್ಬ ಪಾಪಿ ಸಾಕು ಪುಣ್ಯಕೋಟೆಯನ್ನು ಹಾಳುಮಾಡಲು!


ಐಶ್ವರ್ಯವಂತನಿಗೆ ಐಶ್ವರ್ಯವೇ ಬಲವಾದ ಡೆಂಕಣ; ಬಡವನ ಅಳಿವಿಗೆ ಬಡತನವೇ ಕಾರಣ.


ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.


ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನದ ವೈಶಿಷ್ಟ್ಯವೆಂದರೆ ಅದು ಜ್ಞಾನಿಗೆ ಜೀವದಾಯಕ.


ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ ಹೆಚ್ಚು ಬಲಪ್ರಯೋಗ ಮಾಡಬೇಕಾಗುವುದು. ಕಾರ್ಯಸಿಧ್ಧಿಗೆ ಜ್ಞಾನವೇ ಸಾಧನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು