Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:18 - ಕನ್ನಡ ಸತ್ಯವೇದವು C.L. Bible (BSI)

18 ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಆದರೆ ಒಬ್ಬನೇ ಒಬ್ಬ ಪಾಪಿ ಸಾಕು ಪುಣ್ಯಕೋಟೆಯನ್ನು ಹಾಳುಮಾಡಲು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜ್ಞಾನವು ಯುದ್ಧಾಯುಧಗಳಿಗಿಂತಲೂ ಉತ್ತಮ, ಆದರೆ ಮೂಢನು ಒಳ್ಳೆಯದನ್ನು ಹಾಳು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:18
22 ತಿಳಿವುಗಳ ಹೋಲಿಕೆ  

ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಯೇಲರ ಧೈರ್ಯ ಕರಗಿ ನೀರಾಯಿತು.


ಆಕಾನನು ಯೆಹೂದ್ಯ ಕುಲದವನು, ಜೆರಹನ ಗೋತ್ರದವನು, ಕರ್ಮೀಯ ಮಗನೂ ಜಬ್ದೀಯ ಕುಟುಂಬದವನೂ ಆಗಿದ್ದನು. ಸರ್ವೇಶ್ವರಸ್ವಾಮಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಈತ ಕೆಲವನ್ನು ಕದ್ದುಕೊಂಡನು. ಈ ಕಾರಣ ಇಸ್ರಯೇಲರೆಲ್ಲರು ದ್ರೋಹಿಗಳಾದರು. ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು.


ಇದನ್ನು ನೋಡಿದ ನಾನು, ಶಕ್ತಿಗಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಆ ಬಡವನ ಜ್ಞಾನವನ್ನು ತಾತ್ಸಾರ ಮಾಡುತ್ತಾರೆ, ಅವನ ಮಾತುಗಳನ್ನು ಗಮನಿಸುವುದಿಲ್ಲ, ಎಂದುಕೊಂಡೆ.


ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.


ಜೆರಹನ ಮಗ ಆಕಾನನು ಸರ್ವೇಶ್ವರನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದ. ಆಗ ಸರ್ವೇಶ್ವರನ ಕೋಪ ಇಸ್ರಯೇಲರ ಸರ್ವಸಭೆಯ ಮೇಲೆ ಎರಗಿತು. ಅವನ ಪಾಪದ ನಿಮಿತ್ತ ಅವನೊಡನೆ ಅನೇಕರು ಸಾಯಬೇಕಾಯಿತಲ್ಲವೆ?” ಎಂದು ಹೇಳಿದರು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಆಗ “ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ ಜ್ಞಾನ ಮೂಢತನಕ್ಕಿಂತ ಶ್ರೇಷ್ಠ” ಎಂದು ಗೋಚರವಾಯಿತು.


ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನದ ವೈಶಿಷ್ಟ್ಯವೆಂದರೆ ಅದು ಜ್ಞಾನಿಗೆ ಜೀವದಾಯಕ.


ಜನರು ತಾವು ಇಂದು ಶತ್ರುಗಳಿಂದ ಸುಲಿದುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚುಮಂದಿ ಇದ್ದಾರೆ,” ಎಂದನು.


ನಿನ್ನ ನೀಚತನದಿಂದ ನಿನ್ನಂಥವನಿಗೇ ನಷ್ಟ ನಿನ್ನ ಸಜ್ಜನಿಕೆಯಿಂದ ನರಜನ್ಮದವನಿಗೇ ಲಾಭ.


ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.


ಸತ್ತ ನೊಣಗಳಿಂದ ಗಂದಿಗನ ತೈಲ ಕೂಡ ನಾರುತ್ತದೆ. ಅಂತೆಯೇ ಹುಚ್ಚುತನ ಕೊಂಚವಾದರೂ ಜ್ಞಾನಮಾನಗಳನ್ನು ಕೆಡಿಸಿಬಿಡುತ್ತದೆ.


ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ ಹೆಚ್ಚು ಬಲಪ್ರಯೋಗ ಮಾಡಬೇಕಾಗುವುದು. ಕಾರ್ಯಸಿಧ್ಧಿಗೆ ಜ್ಞಾನವೇ ಸಾಧನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು