Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:3 - ಕನ್ನಡ ಸತ್ಯವೇದವು C.L. Bible (BSI)

3 ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನೆಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:3
30 ತಿಳಿವುಗಳ ಹೋಲಿಕೆ  

ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ಜ್ಞಾನ ಎಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳನ್ನು ಅರಿತುಕೊಳ್ಳಲು ಮನಸ್ಸು ಮಾಡಿದೆ. ಆದರೆ ಇದೂ ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ವ್ಯರ್ಥ ಎಂದು ಅರಿತುಕೊಂಡೆ.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ಬಿಳಾಮನು ಅನೀತಿಯಿಂದ ಹಣಗಳಿಸಿದ ಲಾಭಕೋರ; ತನ್ನ ಅಕ್ರಮಕ್ಕೆ ತಕ್ಕ ದಂಡನೆಯನ್ನು ಅನುಭವಿಸಿದವನು. ಮೂಕ ಹೇಸರಗತ್ತೆಯೊಂದು ಮಾನವನಂತೆ ಮಾತಾಡಿ ಈ ಪ್ರವಾದಿಯ ಮೂರ್ಖತನಕ್ಕೆ ತಡೆಹಾಕಿತು.


ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ.


ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು; ಸಜ್ಜನನಿಗೂ ದುರ್ಜನನಿಗೂ, ಒಳ್ಳೆಯವನಿಗೂ (ಕೆಟ್ಟವನಿಗೂ), ಶುದ್ಧನಿಗೂ, ಅಶುದ್ಧನಿಗೂ ಬಲಿಯನ್ನರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿ ಕಾದಿದೆ; ನಿರ್ದೋಷಿಯಂತೆ ದೋಷಿಯೂ ಇರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನೂ ಇರುವನು.


ನಾನು ಮತ್ತೆ ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ, ವಿಚಾರಿಸಿ, ಗ್ರಹಿಸಿಕೊಳ್ಳಲು ಆಶಿಸಿದೆ; ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳಲು ಮನಸ್ಸುಮಾಡಿದೆ.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ಇಂತಿರಲು, ಮತ್ತಷ್ಟೂ ಮಲಿನನಲ್ಲವೆ ನರಮಾನವನು? ಅಸಹ್ಯನು, ಅಕ್ರಮಿಯು, ಕೇಡನ್ನು ನೀರಿನಂತೆ ಕುಡಿಯುವವನು?


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


“ಜ್ಞಾನಿಗೆ ಹಣೆಯಲ್ಲಿ ಕಣ್ಣು, ಮೂಢನೋ ಕತ್ತಲೆಯಲ್ಲಿ ನಡೆಯುತ್ತಾನೆ". ಆದರೆ ಇವರಿಬ್ಬರ ಗತಿ ಒಂದೇ ಎಂದು ಕಂಡುಬಂದಿತು.


ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.


ಜೀವಿತರ ಗುಂಪಿಗೆ ಸೇರಿದವನಿಗೆ ನಂಬಿಕೆ-ನಿರೀಕ್ಷೆಯುಂಟು; ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.


ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಎಲ್ಲವೂ ಒಂದೇ ಆಗಿಬಿಟ್ಟಿದೆ. ಆದ್ದರಿಂದಲೇ ಇಂತೆನ್ನುತ್ತೇನೆ: ‘ದೋಷಿಯೋ ನಿರ್ದೋಷಿಯೋ’ ದೇವರು ಎಲ್ಲರನೂ ನಾಶಗೊಳಿಸುತ್ತಾನೆ.


ಇವರಿಬ್ಬರೂ ಮಣ್ಣಿನಲ್ಲಿ ಹೂಣಲ್ಪಡುತ್ತಾರೆ ಹುಳುಗಳು ಅವರನು ಮುತ್ತಿಕೊಳ್ಳುತ್ತವೆ.


ಆದರೆ ಎಸೆವನು ಬಾಣವನು ದೇವನೆ I ಪಡೆವರು ಅಪಘಾತವನು ಫಕ್ಕನೆ II


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು