Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:5 - ಕನ್ನಡ ಸತ್ಯವೇದವು C.L. Bible (BSI)

5 ಜೀವಿತರಿಗೆ ಖಂಡಿತವಾಗಿ ಸಾಯುತ್ತೇವೆಂಬ ತಿಳುವಳಿಕೆಯಾದರೂ ಉಂಟು. ಸತ್ತವರಿಗಾದರೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಯಾವ ಪ್ರತಿಫಲವೂ ಇಲ್ಲ; ಅವರ ಹೆಸರನ್ನೂ ಜನರು ಮರೆತುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು. ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯು ಉಂಟಷ್ಟೆ; ಸತ್ತವರಿಗೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇಲ್ಲ, ಅವರ ಜ್ಞಾಪಕವೇ ಹೋಯಿತಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯಿದೆ. ಆದರೆ ಸತ್ತವರಿಗೆ ಯಾವ ತಿಳುವಳಿಕೆಯೂ ಇಲ್ಲ. ಸತ್ತವರಿಗೆ ಯಾವ ಪ್ರತಿಫಲವೂ ಇಲ್ಲ. ಜನರು ಅವರನ್ನು ಬೇಗನೆ ಮರೆತುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿದ್ದಾರೆ, ಆದರೆ ಸತ್ತವರಿಗೆ ಏನೂ ತಿಳಿಯದು; ಅವರಿಗೆ ಇನ್ನು ಮೇಲೆ ಪ್ರತಿಫಲ ಇಲ್ಲ. ಅವರ ಹೆಸರನ್ನು ಸಹ ಜನರು ಮರೆತುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:5
18 ತಿಳಿವುಗಳ ಹೋಲಿಕೆ  

ಮಡಿದುಹೋದರು ಆ ಒಡೆಯರೆಲ್ಲ ಮರಳಿ ಅವರ ಪ್ರೇತಗಳು ಎದ್ದುಬರುವಂತಿಲ್ಲ. ನೀನವರನು ಬಡಿದು ನಸುಕಿಹಾಕಿರುವೆ ಅವರ ನೆನಪನೆ ಅಳಿಸಿಹಾಕಿರುವೆ.


ಹಿಂದಿನ ಕಾಲದವರ ಜ್ಞಾಪಕವು ಇಂದಿನವರಿಗಿಲ್ಲ. ಮುಂದಿನ ಕಾಲದವರ ಜ್ಞಾಪಕವು ಅವರಿಗಿಂತ ಮುಂದೆ ಬರುವವರಿಗೆ ಇರುವುದಿಲ್ಲ.


ಸತ್ತವರಲಿ ನಿನ್ನ ಸ್ಮರಿಸುವವರಾರು? I ಪಾತಾಳದಲಿ ನಿನ್ನ ಸ್ತುತಿಸುವವರಾರು?II


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಅವನ ಮಕ್ಕಳು ಪ್ರಗತಿಹೊಂದಿದರೂ ಅವನಿಗೆ ತಿಳಿಯದು ಅವರು ಅಧೋಗತಿಗೆ ಇಳಿದರೂ ಅವನಿಗೆ ಗೋಚರವಾಗದು.


ಏಕೆಂದರೆ ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ನಿರಂತರವಾಗಿ ಮರೆತುಹೋಗುವರು. ಮುಂದಿನ ಕಾಲದವರು ಈಗಿನವರನ್ನೆಲ್ಲ ಮರೆತುಬಿಡುವರು ಎಂಬುದು ನಿಶ್ಚಯ. ನಿಸ್ಸಂದೇಹವಾಗಿ ಮೂಢನಂತೆ ಜ್ಞಾನಿಯು ಮೃತನಾಗುವನು.


ಅವರ ಪಾಪಗಳು ಪ್ರಭುವಿನ ನೆನಪಲ್ಲಿರಲಿ I ಅವನ ಹೆಸರೇ ಇಲ್ಲದಂತಾಗಲಿ ಧರೆಯಲಿ II


ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನು ನೋಡಿದ್ದೇನೆ. ಸಜ್ಜನರು ಆ ಪವಿತ್ರ ಸ್ಥಾನದಿಂದ ಹೊರಟುಬಂದು ಆ ದುರ್ಜನರ ನಡತೆಯನ್ನು ಅವರಿದ್ದ ಪಟ್ಟಣದಲ್ಲೇ ಹೊಗಳುತ್ತಾರೆ! ಇದು ನಿರರ್ಥಕ.


ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.


ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ಜೀವಿತರ ಗುಂಪಿಗೆ ಸೇರಿದವನಿಗೆ ನಂಬಿಕೆ-ನಿರೀಕ್ಷೆಯುಂಟು; ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ನಾನಾದರೋ ಪ್ರಭೂ, ಮೊರೆಯಿಡುವೆ ನಿನಗೆ I ಉದಯದಲೆ ಸೇರುವುದೆನ್ನ ಜಪ ನಿನ್ನ ಸನ್ನಿಧಿಗೆ II


ಕಟ್ಟಕಡೆಗೆ ಆ ಮಹಿಳೆಯೂ ಮರಣಹೊಂದಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು