Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:6 - ಕನ್ನಡ ಸತ್ಯವೇದವು C.L. Bible (BSI)

6 ಅವರ ಪ್ರೀತಿ, ದ್ವೇಷ, ಮತ್ಸರ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಇಹಲೋಕದಲ್ಲಿ ನಡೆಯುವ ಯಾವುದರಲ್ಲೂ ಅವರಿಗೆ ಇನ್ನೆಂದಿಗೂ ಪಾಲಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಸತ್ತಾಗಲೇ ಅವರ ಪ್ರೀತಿಯೂ ಹಗೆಯೂ ಹೊಟ್ಟೇಕಿಚ್ಚೂ ಅಳಿದುಹೋದವು; ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಸತ್ತಾಗಲೇ, ಅವರ ಪ್ರೀತಿ, ದ್ವೇಷ ಮತ್ತು ಹೊಟ್ಟೆಕಿಚ್ಚು ಅಳಿದುಹೋದವು; ಸತ್ತವರು ಭೂಲೋಕದ ಕಾರ್ಯಗಳಲ್ಲಿ ಇನ್ನೆಂದಿಗೂ ಪಾಲುಗಾರರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರ ಪ್ರೀತಿಯೂ ಅವರ ದ್ವೇಷವೂ ಅವರ ಅಸೂಯೆ ಕೂಡ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಸೂರ್ಯನ ಕೆಳಗೆ ನಡೆಯುವ ಯಾವ ಸಂಗತಿಗಳಲ್ಲಿಯೂ ಸತ್ತವರಿಗೆ ಇನ್ನೆಂದಿಗೂ ಪಾಲು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:6
11 ತಿಳಿವುಗಳ ಹೋಲಿಕೆ  

“ಏಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು,” ಎಂದು ತಿಳಿಸಿದನು.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮಾನವನ ಜೀವಮಾನ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಹಿತವೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಳ್ಳಲು ಸಾಧ್ಯ?


ಸಜ್ಜನರ ನಂಬಿಕೆ ಆನಂದಕರ; ದುರ್ಜನರ ನಿರೀಕ್ಷೆ ವಿನಾಶಕರ.


ಅನಂತರ ಹೊಸ ರಾಜನೊಬ್ಬನು ಈಜಿಪ್ಟ್ ದೇಶದ ಆಳ್ವಿಕೆಗೆ ಬಂದನು. ಅವನಿಗೆ ಜೋಸೆಫನ ವಿಷಯ ತಿಳಿದಿರಲಿಲ್ಲ.


ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ಒಪ್ಪಿಸಿದೆ. ಹೃದಯ ಕೋರಿದ ಸಂತೋಷವನ್ನು ಅದಕ್ಕೆ ನಿರಾಕರಿಸಲಿಲ್ಲ. ನನ್ನ ಮನ ಎಲ್ಲಾ ಕಾರ್ಯಕಲಾಪಗಳಲ್ಲೂ ಉಲ್ಲಾಸಗೊಳ್ಳುತ್ತಿತ್ತು. ಇವೆಲ್ಲ ನನ್ನ ಪ್ರಯಾಸಕ್ಕೆ ದೊರೆತ ಫಲ.


ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ.


ಜೀವಲೋಕದಲ್ಲಿ ಇನ್ನು ದೇವನನ್ನು ಕಾಣೆನೆಂದುಕೊಂಡೆ ಭೂಲೋಕನಿವಾಸಿಗಳಲ್ಲಿ ಒಬ್ಬನನ್ನೂ ನೋಡಲಾರೆನೆಂದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು