Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:8 - ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ಬಟ್ಟೆಗಳು ಬೆಳ್ಳಗಿರಲಿ, ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಬಟ್ಟೆಗಳು ಬೆಳ್ಳಗಿರಲಿ; ತಲೆಗೆ ತೈಲದ ಕೊರತೆ ಇಲ್ಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಳ್ಳೆಯ ಉಡುಪುಗಳನ್ನು ಧರಿಸಿಕೊಂಡು ನಿನ್ನನ್ನು ಅಲಂಕರಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ, ನಿನ್ನ ತಲೆಗೆ ಯಾವಾಗಲೂ ಎಣ್ಣೆ ಹಚ್ಚಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:8
15 ತಿಳಿವುಗಳ ಹೋಲಿಕೆ  

ಸ್ವರ್ಗದ ಸೈನಿಕರು ಬಿಳಿಯ ಕುದುರೆಗಳನ್ನೇರಿ ಆತನನ್ನು ಹಿಂಬಾಲಿಸಿದರು. ಅವರು ಶುಭ್ರವಾದ ಬಿಳಿಯ ಸಮವಸ್ತ್ರಗಳನ್ನು ಧರಿಸಿದ್ದರು.


ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.”


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ಆ ಮೂರು ವಾರ ಮುಗಿಯುವ ತನಕ ನಾನು ಯಾವ ರುಚಿಪದಾರ್ಥವನ್ನೂ ತಿನ್ನಲಿಲ್ಲ. ಮಾಂಸವನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಬಾಯಲ್ಲಿ ಇಡಲಿಲ್ಲ. ಎಣ್ಣೆಯನ್ನೂ ಹಚ್ಚಿಕೊಳ್ಳಲಿಲ್ಲ.


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನ ದರ್ಶನಕ್ಕೆ ಬಂದನು. ಅರಸನು ಜೆರುಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಪಾದಗಳನ್ನು ತೊಳೆದುಕೊಂಡಿರಲಿಲ್ಲ; ಮೀಸೆಯನ್ನು ಕತ್ತರಿಸಿರಲಿಲ್ಲ; ಬಟ್ಟೆಗಳನ್ನು ಒಗೆಸಿಕೊಂಡಿರಲಿಲ್ಲ.


ನೀನು ಸ್ನಾನಮಾಡಿಕೊಂಡು ಸುಗಂಧ ತೈಲವನ್ನು ಹಚ್ಚಿ, ಸೊಗಸಾದ ಉಡುಪನ್ನು ತೊಟ್ಟುಕೊ. ಆಮೇಲೆ ಕಣಕ್ಕೆ ಹೋಗು. ಅವನು ಅನ್ನಪಾನಮಾಡಿ ಮುಗಿಸುವವರೆಗೂ ಅವನಿಗೆ ಕಾಣಿಸಿಕೊಳ್ಳಬೇಡ.


ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ.


ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ.


ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ;


ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು