Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:12 - ಕನ್ನಡ ಸತ್ಯವೇದವು C.L. Bible (BSI)

12 ಸಹೋದರರೇ, ನನಗೆ ಬಂದೊದಗಿರುವುದೆಲ್ಲವೂ ಶುಭಸಂದೇಶದ ಬೆಳವಣಿಗೆಗೆ ಹಿತಕರವಾಗಿ ಪರಿಣಮಿಸಿದೆ. ಇದು ನಿಮಗೆ ತಿಳಿದಿರಬೇಕೆಂಬುದೇ ನನ್ನ ಆಶಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಹೋದರ ಸಹೋದರಿಯರೇ, ನನಗೆ ಸಂಭವಿಸಿದ ಕಷ್ಟಗಳು ಸುವಾರ್ತೆಯನ್ನು ಹಬ್ಬಿಸಲು ಸಹಾಯಕವಾದವೆಂದು ನಿಮಗೆ ತಿಳಿದಿರಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಿಯರೇ, ನನಗೆ ಸಂಭವಿಸಿದ ಸಂಕಟಗಳು ಸುವಾರ್ತೆಯ ಪ್ರಗತಿಗಾಗಿಯೇ ಅನುಕೂಲವಾಯಿತು ಎಂಬುದನ್ನು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಭಾವಾನು ಅನಿ ಭೆನಿಯಾನು, ಮಾಕಾ ಹೆ ಸಗ್ಳೆ ಹೊಲ್ಲೆ ಬರಿ ಖಬರ್ ಪರ್ಗಟ್ ಕರುಕ್ ಮಜತ್ ಹೊಲೆ ಮನುನ್ ತುಮಿ ಕಳ್ವುನ್ ಘೆವ್ಚೆ ಮನ್ತಲಿ ಮಾಜಿ ಆಶ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:12
19 ತಿಳಿವುಗಳ ಹೋಲಿಕೆ  

ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.


ಚದರಿಹೋದ ಭಕ್ತವಿಶ್ವಾಸಿಗಳು ಎಲ್ಲೆಲ್ಲೂ ಹೋಗಿ ಶುಭಸಂದೇಶವನ್ನು ಸಾರುತ್ತಿದ್ದರು.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಅರಸನ ಆಜ್ಞೆಯನ್ನು, ನಿರ್ಣಯವನ್ನು ನೆರವೇರಿಸತಕ್ಕ ದಿನವು ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ತಾವೇ ಸ್ವಾಧೀನಪಡಿಸಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ ಸದವಕಾಶವಾಗಿರುತ್ತದೆ.


ಏಕೆಂದರೆ, ನಾನು ನಿಮ್ಮನ್ನು ಸಂಧಿಸಿದ ಮೊದಲ ದಿನದಿಂದ ಇಂದಿನವರೆಗೂ ನೀವು ನನ್ನೊಡನೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸುತ್ತಿರುವಿರಿ.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ತಿಮೊಥೇಯನ ಯೋಗ್ಯತೆಯನ್ನು ನೀವು ಬಲ್ಲಿರಿ. ತಂದೆಯೊಂದಿಗೆ ಮಗನು ದುಡಿಯುವಂತೆ, ಶುಭಸಂದೇಶದ ಸೇವೆಯಲ್ಲಿ ನನ್ನೊಂದಿಗೆ ಆತನು ದುಡಿದಿದ್ದಾನೆ.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಫಿಲಿಪ್ಪಿಯ ಸಹೋದರರೇ, ನಾನು ಶುಭಸಂದೇಶವನ್ನು ಸಾರಲು ಹೊರಟ ಪ್ರಾರಂಭದ ದಿನಗಳಲ್ಲಿ ಮಕೆದೋನಿಯವನ್ನು ಬಿಟ್ಟುಹೋದಾಗ ನೀವಲ್ಲದೆ ಬೇರೆ ಯಾವ ಸಭೆಯೂ ನನ್ನ ಆಯ-ವ್ಯಯಗಳಲ್ಲಿ ನೆರವಾಗಿರಲಿಲ್ಲ. ಇದು ನಿಮಗೆ ತಿಳಿದ ವಿಷಯ.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು