Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:15 - ಕನ್ನಡ ಸತ್ಯವೇದವು C.L. Bible (BSI)

15 ಕೆಲವರೇನೋ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಕ್ರಿಸ್ತಯೇಸುವನ್ನು ಸಾರುತ್ತಿರುವುದು ನಿಜ; ಆದರೆ ಮಿಕ್ಕವರು ಸದುದ್ದೇಶದಿಂದ ಸಾರುತ್ತಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೆಲವರು ತಮ್ಮಲ್ಲಿರುವ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಇನ್ನು ಕೆಲವರು ಸಹಾಯ ಮಾಡಬೇಕೆಂಬ ಉದ್ದೇಶದಿಂದಲೂ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಉಲ್ಲಿ ಲೊಕಾ ಕುಸ್ಡೆಪಾನ್ ಅನಿ ಭೆದ್-ಭಾವ್ ಹಾನುಚೆ ಮನುನ್ ಅನಿ ಉಲ್ಲಿ ಲೊಕಾ ಬರ್‍ಯಾ ಮನಾನ್ ಕ್ರಿಸ್ತಾಕ್ ಪರ್ಗಟ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:15
22 ತಿಳಿವುಗಳ ಹೋಲಿಕೆ  

ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ಅವರು ಕಪಟ ಪ್ರೇಷಿತರು, ಕಳ್ಳ ಕೆಲಸಗಾರರು, ಕ್ರಿಸ್ತಯೇಸುವಿನ ಪ್ರೇಷಿತರಂತೆ ನಟಿಸುವವರು.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ?


ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.


ಆಗ ಫಿಲಿಪ್ಪನು ಮರುತ್ತರವಾಗಿ, ಆ ಪ್ರವಾದನೆಯನ್ನೇ ಆಧಾರವಾಗಿ ತೆಗೆದುಕೊಂಡು, ಯೇಸುವಿನ ಶುಭಸಂದೇಶವನ್ನು ಅವನಿಗೆ ಬೋಧಿಸಿದನು.


ಯೇಸುವೇ ಲೋಕೋದ್ಧಾರಕನೆಂದು ಪ್ರತಿದಿನ ದೇವಾಲಯದಲ್ಲೂ ಮನೆಮನೆಗಳಲ್ಲೂ ಉಪದೇಶಿಸುವುದರಲ್ಲಿ ಹಾಗೂ ಸಾರುವುದರಲ್ಲಿ ನಿರತರಾದರು.


ಫಿಲಿಪ್ಪನು ಸಮಾರಿಯದ ಪ್ರಮುಖ ಪಟ್ಟಣ ಒಂದಕ್ಕೆ ಹೋಗಿ ಅಲ್ಲಿಯ ಜನರಿಗೆ ಯೇಸುವೇ ಅಭಿಷಿಕ್ತನಾದ ಲೋಕೋದ್ಧಾರಕನೆಂದು ಸಾರಿದನು.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು