Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:16 - ಕನ್ನಡ ಸತ್ಯವೇದವು C.L. Bible (BSI)

16 ಒಲವಿನ ಒತ್ತಾಯದಿಂದ ಸಾರುತ್ತಿದ್ದಾರೆ; ಶುಭಸಂದೇಶದ ಸತ್ಯವನ್ನು ಸಮರ್ಥಿಸುವುದಕ್ಕಾಗಿ ನಾನು ಬಂಧಿತನೆಂದು ಇವರು ಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವದಕ್ಕೆ ಇಲ್ಲಿ ಬಿದ್ದಿರುತ್ತೇನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇವರು ತಮ್ಮಲ್ಲಿ ಪ್ರೀತಿಯಿರುವುದರಿಂದಲೇ ಜನರಿಗೆ ಬೋಧಿಸುತ್ತಾರೆ. ಸುವಾರ್ತೆಯನ್ನು ಪ್ರತಿಪಾದಿಸುವ ಕೆಲಸವನ್ನು ದೇವರು ನನಗೆ ಕೊಟ್ಟನೆಂಬುದು ಇವರಿಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವರಾದರೋ, ನಾನು ಸುವಾರ್ತೆಗಾಗಿ ನೇಮಕವಾಗಿದ್ದೇವೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೆನಿ ತರ್ ಬರ್‍ಯಾ ಖಬ್ರೆಕ್ ಉತ್ತರ್ ಸಾಂಗ್ತಲ್ಯಾ ವಿಶಯಾತ್ ಮಾಕಾ ಹಿತ್ತೆ ಘಾಟ್ಲಾತ್ ಮನುನ್ ಗೊತ್ತ್ ಕರುನ್ ಘೆವ್ನ್ ಪ್ರೆಮಾನ್ ಪರ್ಗಟ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:16
13 ತಿಳಿವುಗಳ ಹೋಲಿಕೆ  

ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಸಹೋದರರೇ, ನನಗೆ ಬಂದೊದಗಿರುವುದೆಲ್ಲವೂ ಶುಭಸಂದೇಶದ ಬೆಳವಣಿಗೆಗೆ ಹಿತಕರವಾಗಿ ಪರಿಣಮಿಸಿದೆ. ಇದು ನಿಮಗೆ ತಿಳಿದಿರಬೇಕೆಂಬುದೇ ನನ್ನ ಆಶಯ.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II


ಸಂಕಟದಲ್ಲಿ ಆಗದಾ ನೆಂಟನಿಗೆ ಸರ್ವಶಕ್ತನಲ್ಲಿ ಭಯಭಕ್ತಿ ಇರುವುದುಂಟೆ?


ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.


ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.


ಏಕೆಂದರೆ, ನಾನು ನಿಮ್ಮನ್ನು ಸಂಧಿಸಿದ ಮೊದಲ ದಿನದಿಂದ ಇಂದಿನವರೆಗೂ ನೀವು ನನ್ನೊಡನೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸುತ್ತಿರುವಿರಿ.


ತಿಮೊಥೇಯನ ಯೋಗ್ಯತೆಯನ್ನು ನೀವು ಬಲ್ಲಿರಿ. ತಂದೆಯೊಂದಿಗೆ ಮಗನು ದುಡಿಯುವಂತೆ, ಶುಭಸಂದೇಶದ ಸೇವೆಯಲ್ಲಿ ನನ್ನೊಂದಿಗೆ ಆತನು ದುಡಿದಿದ್ದಾನೆ.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಫಿಲಿಪ್ಪಿಯ ಸಹೋದರರೇ, ನಾನು ಶುಭಸಂದೇಶವನ್ನು ಸಾರಲು ಹೊರಟ ಪ್ರಾರಂಭದ ದಿನಗಳಲ್ಲಿ ಮಕೆದೋನಿಯವನ್ನು ಬಿಟ್ಟುಹೋದಾಗ ನೀವಲ್ಲದೆ ಬೇರೆ ಯಾವ ಸಭೆಯೂ ನನ್ನ ಆಯ-ವ್ಯಯಗಳಲ್ಲಿ ನೆರವಾಗಿರಲಿಲ್ಲ. ಇದು ನಿಮಗೆ ತಿಳಿದ ವಿಷಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು